ಬಸವನ ಬಾಗೇವಾಡಿ-ತಾಲ್ಲೂಕು ಬಿಜೆಪಿ ಮಂಡಲದ ನೂತನ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಉಕ್ಕಲಿ ಗ್ರಾಮದ ಬಿಜೆಪಿ ಯುವ ಮುಖಂಡ ರಾಹುಲ ಕಲಗೊಂಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ (ಕೂಚಬಾಳ) ತಿಳಿಸಿದ್ದಾರೆ.
ರಾಹುಲ ಕಲಗೊಂಡ ಅವರ ಆಯ್ಕೆಗೆ ಮಾಜಿ ಸಚಿವರಾದ ಎಸ್.ಕೆ.ಬೇಳ್ಳುಬ್ಬಿಯವರು,ಮಂಡಲ ಅಧ್ಯಕ್ಷರು ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ನೂತನ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಹುಲ ಕಲಗೊಂಡ “ಪಕ್ಷದ ಹಿರಿಯರು, ಮಾಜಿ ಸಚಿವರು, ಪಕ್ಷದ ಕಾರ್ಯಕರ್ತರು ನನ್ನ ಮೇಲೆ ಭರವಸೆಯನ್ನಿಟ್ಟು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿಯನ್ನು ನೀಡಿದ್ದಾರೆ.ಅದಕ್ಕೆ ಯಾವುದೇ ರೀತಿಯ ಕಪ್ಪು ಚುಕ್ಕೆ ಬಾರದಂತೆ ಜವಾಬ್ದಾರಿಯನ್ನು ಮುನ್ನಡೆಸಿಕೊಂಡು ಹೋಗುತ್ತೇನೆ ಎಂದರು.
