ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅನಂತ್‌ಕುಮಾರ್‌ ಹೆಗಡೆ ಹೇಳಿಕೆಗೆ ಖಂಡನೆ

ಕಲಬುರಗಿ:ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಅವರಂತಹ ಮಾತನಾಡುವ ಗೊಂಬೆಗಳನ್ನು ಎದುರಿಗೆ ಇಟ್ಟುಕೊಂಡು ಭಾರತೀಯ ಜನತಾ ಪಾರ್ಟಿ ರಾಜಕೀಯ ಬೇಳೆ ಬೇಯಿಸುವ ಕಾರ್ಯದಲ್ಲಿ ತೊಡಗಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಕಾರ ವಠಾರ ಟೀಕಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರತಿ ಬಾರಿ ಹವಣಿಸುತ್ತಿದ್ದು ಡಾ.ಬಿ.ಆರ್.ಅಂಬೇಡ್ಕರ್‌ ಅವರು ರಚಿಸಿರುವ ಸಂವಿಧಾನವು ಶ್ರೇಷ್ಠವಾಗಿದ್ದು,ಜಗತ್ತು ಸಂವಿಧಾನವನ್ನು ಮೆಚ್ಚಿಕೊಂಡಿದೆ.ಆದರೆ ಕೇಂದ್ರ ಸಚಿವರೆನಿಸಿಕೊಂಡವರು ಅದರ ಅರಿವೆ ಇಲ್ಲ ಎನ್ನುವಂತೆ ಮಾತನಾಡುವುದು ಖಂಡನೀಯವಾಗಿದ್ದು,ಸಚಿವ ಸಂಪುಟದಿಂದ ಕೈಬಿಡಬೇಕು ಎಂದು
ಸಂವಿಧಾನವನ್ನೇ ಕೀಳಾಗಿ ಕಾಣುವ ಮನೋಸ್ಥಿತಿ ಅನಂತಕುಮಾರ ಹೆಗಡೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆಯನ್ನು ನೀಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವ ಅನಂತಕುಮಾರ ಹೆಗಡೆ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಗೌರವವನ್ನು ನೀಡದೆ ಅತೀರೇಕದ ವರ್ತನೆ ತೋರುತ್ತಿದ್ದಾರೆ ಹಾಗಾಗಿ ಅವರನ್ನು ತಕ್ಷ ಣ ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ.
ಸಭ್ಯರ ಮತ್ತು ಪ್ರಜ್ಞಾವಂತರ ನಾಡು ಕೊಡಗಿನಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಕೇಂದ್ರ ಸಚಿವರು ತಮ್ಮ ಸ್ಥಾನಕ್ಕೆ ಅಗೌರವ ತೋರಿದ್ದಾರೆ. ಸಚಿವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಮತ್ತು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ