ಶಿವಮೊಗ್ಗ:ಲೋಕಸಭೆ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ.ಈಗಾಗಲೇ ಅವರ ಪ್ರವಾಸದ ಪಟ್ಟಿ ನಿಗದಿಯಾಗಿದ್ದು,ಶಿವಮೊಗ್ಗದಲ್ಲಿ ಸಭೆ ಆಯೋಜಿಸಲಾಗುತ್ತಿದೆ.
ಮಾರ್ಚ್ 17ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ.ಅಂದು ಬೆಳಗ್ಗೆ ಕೇರಳದಲ್ಲಿ ಮೊದಲ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ,ಆ ಬಳಿಕ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.ಇಲ್ಲಿ ಆ ದಿನದ ಎರಡನೇ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್) ಸಭೆ ಆಯೋಜಿಸುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ,ಉಡುಪಿ-ಚಿಕ್ಕಮಗಳೂರು,ಉತ್ತರ ಕನ್ನಡ ಮತ್ತು ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಗೆ ಈ ಸಭೆ ನಿಗದಿಗೊಳಿಸಲಾಗಿದೆ ಎಂದು ಬಿಜೆಪಿಯ ವಲಯದಿಂದ ತಿಳಿದುಬಂದಿದೆ.
