ಹನೂರು ಪಟ್ಟಣದಿಂದ ಎಲ್ಲೆಮಾಳ ರಸ್ತೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಕೋಟ್ಯಾಂತರ ಭಕ್ತರ ಆರಾಧ್ಯ ದೈವ ಮಲೆ ಮಾದೇಶ್ವರನ ಬೆಟ್ಟಕ್ಕೆ ತೆರಳುವ ಮಾರ್ಗ ಎಲ್ಲೇಮಾಳ ರಸ್ತೆಯು ಕಾಮಗಾರಿ ಪ್ರಾರಂಭಿಸಿ ನಿಗದಿತ ಸಮಯಕ್ಕೆ ಪೂರ್ಣಗೊಳ್ಳದೆ ಇರುವುದರಿಂದ ಇಲ್ಲಿನ ಶ್ರೀ ಕ್ಷೇತ್ರಕ್ಕೆ ತೆರಳುವ ಹಾಗೂ ವಿವಿಧ ಗ್ರಾಮಗಳಿಗೆ ತೆರಳುವ ಭಕ್ತಾದಿಗಳಿಗೆ ಮತ್ತು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ ಗುತ್ತಿಗೆದಾರರು ಗುಣಮಟ್ಟದಿಂದ ಕಾಮಗಾರಿಯನ್ನು ಅಚ್ಚುಕಟ್ಟಾಗಿ ನಿರ್ಮಾಣ ಮಾಡಬೇಕು ವಾಹನಗಳು ಓಡಾಡುವ ಸಂದರ್ಭದಲ್ಲಿ ಅವಕಾಶ ಕಲ್ಪಿಸಿ ಸಾರ್ವಜನಿಕವಾಗಿ ಯಾವುದೇ ಸಮಸ್ಯೆಗಳು ಬರದಂತೆ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು ಈಗಾಗಲೇ ಇಲ್ಲಿ ನಡೆಯುತ್ತಿರುವ ಕಾಮಗಾರಿಯಿಂದ ಹಲವಾರು ಅಪಘಾತಗಳು ಸಂಭವಿಸಿದೆ ಹೀಗಾಗಿ ಇಲ್ಲಿ ನಡೆಯುತ್ತಿರುವ ಕಾಮಗಾರಿ ಅಚ್ಚುಕಟ್ಟಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಗುತ್ತಿಗೆದಾರ,ಗ್ರಾಮ ಪಂಚಾಯಿತಿ ಸದಸ್ಯರಾದ ಚಿನ್ನವೆಂಕಟ ಹಾಗೂ ಮುಖಂಡರುಗಳಾದ ಮಂಜೇಶ್ ಗೌಡ ವಿಜಯಕುಮಾರ್ ಇನ್ನಿತರರು ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್