ಬೆಂಗಳೂರು ನಗರದ ಕೆಂಗೇರಿಯ ಹೊಯ್ಸಳ ಸರ್ಕಲ್ ನಲ್ಲಿ ಕಟ್ಟಡ ಕಾರ್ಮಿಕ ಹನುಮಂತ ರಾಯಪ್ಪ ಅವರು ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ಕೊಟ್ಟು ನಮ್ಮ ಕರ್ನಾಟಕ ಸೇನೆ ಕಟ್ಟಡ ಕಾರ್ಮಿಕ ಘಟಕದ ಅಧ್ಯಕ್ಷರಾದ ಚಂದ್ರಕಾಂತ್ ಅವರು ಕುಟುಂಬದವರಿಗೆ ಸಾಂತ್ವಾನ ಹೇಳಿದರು ಅಲ್ಲದೆ ಸರಕಾರದ ವಿರುದ್ಧ ಕಿಡಿಕಾರಿದರು ಬೆಂಗಳೂರಿನ ನಗರದಲ್ಲಿ ಹಾಗೂ ಹಲವಾರು ಕಡೆಗಳಲ್ಲಿ ಕಟ್ಟಡ ಕಾರ್ಮಿಕರು ಯಾವುದೇ ಸುರಕ್ಷಾ ಕವಚಗಳಲ್ಲದೆ ಅಥವಾ ಮೆಟಲ್ ಬೆಲ್ಟ್ ಇಲ್ಲದೆ ಕೆಲಸ ಮಾಡುತ್ತಿದ್ದಾರೆ ಹಾಗೂ ಆಯ ತಪ್ಪಿ ಕೆಳಗೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಕಟ್ಟಡದ ಮಾಲೀಕರು ಅಸ್ಟೋ ಇಷ್ಟೋ ದುಡ್ಡು ಕೊಟ್ಟು ಕೈ ತೊಳೆದುಕೊಳ್ಳುತ್ತಿದ್ದಾರೆ ಆದ್ದರಿಂದ ಕಟ್ಟಡದ ಕಾರ್ಮಿಕರ ಜೀವಗಳಿಗೆ ಬೆಲೆ ಇಲ್ಲದಂತಾಗಿದೆ ಕಟ್ಟಡ ಕಾರ್ಮಿಕರ ಬಗ್ಗೆ ಸರ್ಕಾರ ನಿರ್ಲಕ್ಷ್ಯ ಧೋರಣೆ ತಾಳಿದೆ ಕಟ್ಟಡ ಕಾರ್ಮಿಕರ ಬಗ್ಗೆ ಕಾಳಜಿ ಇದ್ದರೆ ಕಟ್ಟಡ ಕಾರ್ಮಿಕರ ಪರವಾಗಿ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯನ್ನು ಜಾರಿಗೆ ತರಬೇಕು ಈಗಾಗಲೇ ಮೃತಪಟ್ಟ ಕಟ್ಟಡ ಕಾರ್ಮಿಕ ಹನುಮಂತರಾಯಪ್ಪನವರಿಗೆ 20 ಲಕ್ಷ ರೂಪಾಯಿ ಪರಿಹಾರ ಧನ ಕೊಡಬೇಕು ಮತ್ತು ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮಾಸಿಕ ವೇತನ ಹಾಗೂ ಕಾರ್ಮಿಕರ ಪಿಂಚಣಿ ಯೋಜನೆಯನ್ನು ಸರ್ಕಾರ ಜಾರಿಗೆ ತರಬೇಕು ಈಗಾಗಲೇ ಹಲವಾರು ವರ್ಷಗಳಿಂದ ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆಯನ್ನು ಜಾರಿಗೆ ತಂದಿದೆ ಕಾರ್ಮಿಕ ಇಲಾಖೆಯವರು ನಿದ್ದೆ ಮಾಡುತ್ತಿದ್ದಾರೆಯೋ ಗೊತ್ತಿಲ್ಲ ಈಗಾಗಲೇ ಕಟ್ಟಡ ಕಾರ್ಮಿಕರ ಲೇಬರ್ ಕಾರ್ಡುಗಳನ್ನು ಹಂಚಲಾಗಿದೆ ನಿಜವಾದ ಕಟ್ಟಡ ಕಾರ್ಮಿಕರಿಗೆ ಲೇಬರ್ ಕಾರ್ಡ್ ತಲುಪದಿರುವುದು ದುರದೃಷ್ಟಕರ ಸಂಗತಿ ಅದೇ ರೀತಿಯಾಗಿ ನಕಲಿ ಲೇಬರ್ ಕಾರ್ಡುಗಳನ್ನು ರದ್ದುಪಡಿಸಬೇಕು ನಿಜವಾದ ಫಲಾನುಭವಿಗಳಿಗೆ ಲೇಬರ್ ಕಾರ್ಡ್ ವಿತರಿಸಬೇಕು ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಬೆಂಗಳೂರು ನಗರದ ಕಟ್ಟಡ ಕಾರ್ಮಿಕರ ಕಚೇರಿಗೆ ಮುಂದೆ ಬರುವಂತಹ ದಿನಗಳಲ್ಲಿ ಕಾರ್ಯಕರ್ತರೊಂದಿಗೆ ಚರ್ಚಿಸಿ ಮುತ್ತಿಗೆ ಹಾಕಲಾಗುವುದು ಅದೇ ರೀತಿಯಾಗಿ ಈ ಕೂಡಲೇ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯನ್ನು ಜಾರಿಗೆ ತಂದು ಪ್ರತಿಯೊಬ್ಬ ಕಟ್ಟಡ ಕಾರ್ಮಿಕರಿಗೆ ನ್ಯಾಯ ಒದಗಿಸಿ ಕೊಡಬೇಕು ದಶಕಗಳಿಂದ ನೆನಗುದಿಗೆ ಬಿದ್ದ ಕಾರ್ಮಿಕರ ಬೇಡಿಕೆಗಳನ್ನು ಜಾರಿಗೆ ತರಬೇಕು ಎಂದು ನಮ್ಮ ಕರ್ನಾಟಕ ಸೇನಾ ಕಟ್ಟಡ ಕಾರ್ಮಿಕರ ಬೆಂಗಳೂರು ನಗರದ ಘಟಕದ ಅಧ್ಯಕ್ಷರಾದ ಚಂದ್ರಕಾಂತ್ ಅವರು ಸರ್ಕಾರಕ್ಕೆ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.
