ಕೊಪ್ಪಳ:ಯುವಕರಿಗೆ ಎರಡು ಕೋಟಿ ಉದ್ಯೋಗ ಸೃಷ್ಟಿ ಕೊಡುವುದಾಗಿ ಹೇಳಿ ಪ್ರಧಾನಿ ನರೇಂದ್ರ ಮೋದಿ ಮಾತು ತಪ್ಪಿದ್ದಾರೆ.ಉದ್ಯೋಗ ಕೊಡಿ ಎಂದು ಕೇಳಿದರೆ ಪಕೋಡಾ ಮಾರಲು ಹೋಗಿ ಎಂದಿದ್ದಾರೆ.ಈಗಲೂ ಯುವಕರು ಹಾಗೂ ವಿದ್ಯಾರ್ಥಿಗಳು ಮೋದಿ ಮೋದಿ ಎಂದರೆ ಅವರನ್ನು ಕಪಾಳಕ್ಕೆ ಹೊಡೆಯಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಕಾರಟಗಿಯಲ್ಲಿ ಭಾನುವಾರ ನಡೆದ ಲೋಕಸಭಾ ಚುನಾವಣೆಯ ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿ ‘ಕೇಂದ್ರ ಬರ ಪರಿಹಾರ ಕೊಡದ ಕಾರಣಕ್ಕೆ ನಾವು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ ಆದರೂ ಬಿಜೆಪಿಯವರು ಮತ ಕೇಳಲು ಜನರ ಬಳಿ ಬರುತ್ತಿದ್ದಾರೆ.ಇವರಿಗೆ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡುವ ಯೋಗ್ಯತೆಯಿಲ್ಲ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಟ್ಟಿದ್ದರೆ ಹತ್ತು ವರ್ಷದಲ್ಲಿ 20 ಕೋಟಿ ಜನರಿಗೆ ಉದ್ಯೋಗ ಲಭಿಸುತ್ತಿತ್ತು’ ಎಂದು ಹರಿಹಾಯ್ದರು.
