ಕಲಬುರಗಿ:ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಗೆಲುವಿಗೆ ಕಾರ್ಯಕರ್ತರು ಹಗಲಿರುಳು ಶ್ರಮಿಸಬೇಕು ಎಂದು ಕಾಂಗ್ರೆಸ್ ನ ಪರಿಶಿಷ್ಠ ಜಾತಿ ವಿಭಾಗದ ಜಿಲ್ಲಾ ಮಾಧ್ಯಮ ವಕ್ತಾರರಾದ ಅಮೃತ ಸಜ್ಜನ ಅವರು ಮನವಿ ಮಾಡಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಅಭ್ಯರ್ಥಿ ಗೆಲುವಿಗೆ ಸೇನಾನಿಗಳಂತೆ ಕೆಲಸ ಮಾಡಬೇಕು ರಾಜ್ಯದ ಕಾಂಗ್ರೆಸ್ ಸರ್ಕಾರ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ.ಎಲ್ಲಾ ವರ್ಗದವರಿಗೆ ಅನುಕೂಲ ಆಗುವಂತಹ 5 ಗ್ಯಾರಂಟಿಗಳನ್ನು ನೀಡಿದೆ. ಕಾಂಗ್ರೆಸ್ ಸದಾ ದಲಿತರು, ಬಡವರು, ಶೋಷಿತರ ಪರವಾಗಿರುವ ಪಕ್ಷವಾಗಿದ್ದು, ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕು. ಕೋಮುವಾದಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಗೆಲ್ಲಿಸಿ’ ಎಂದರು.
ಬಿಜೆಪಿ ಜನರಿಗೆ ಸುಳ್ಳು ಹೇಳುವ ಮೂಲಕ ಅಧಿಕಾರ ಪಡೆಯುತ್ತಿದೆ.ಅಭಿವೃದ್ಧಿ ಬಿಟ್ಟು ಧರ್ಮದ ಹೆಸರಲ್ಲಿ ರಾಜಕೀಯ ಮಾಡುತ್ತಿದೆ. ಕಲಬುರಗಿ ಕ್ಷೇತ್ರ ಹಿಂದಿನಿಂದಲೂ ಕಾಂಗ್ರೆಸ್ ಭದ್ರ ಕೋಟೆಯಾಗಿದ್ದು, 9 ವಿಧಾನಸಭಾ ಕ್ಷೇತ್ರಗಳಲ್ಲಿ 7 ಕಡೆ ಕಾಂಗ್ರೆಸ್ ಶಾಸಕರಿದ್ದಾರೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕು’ ಎಂದು ಅವರು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.