ಬೆಳಗಾವಿ/ಚಿಕ್ಕೋಡಿ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನಿಪ್ಪಾಣಿ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಮೇ.07 ರಂದು ಜರುಗುವ ಲೋಕಸಭೆ ಚುನಾವಣೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನರ ಕಷ್ಟಗಳಿಗೆ ಸ್ಪಂದಿಸಿದ ಕಾಂಗ್ರೆಸ್ ಪಕ್ಷ ನಿಮ್ಮ ಆಯ್ಕೆಯಾಗಿರಲಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ,ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಹೋದರಿ ಪ್ರಿಯಾಂಕ ಜಾರಕಿಹೊಳಿ,ಮಾಜಿ ಶಾಸಕರು ಶ್ರೀ ಕಾಕಾಸಾಹೇಬ ಪಾಟೀಲ,ಶ್ರೀ ವೀರಕುಮಾರ ಪಾಟೀಲ,ಶ್ರೀ ಶ್ಯಾಮ ಘಾಟಗೆ,ಶ್ರೀ ಲಕ್ಷ್ಮಣ ರಾವ್ ಚಿಂಗಳೆ ಸೇರಿ ಸ್ಥಳೀಯ ನಾಯಕರು ಮುಖಂಡರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ-ಧರಿಯಪ್ಪ ಕುಪಕಡ್ಡಿ