ತುಮಕೂರು. ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ಕೇಂದ್ರ ಸರ್ಕಾರ ವಿಧಿಸಿರುವ ಷರತ್ತಿಗೋಳಪಡಿಸಿ ರೈತರಿಂದ ರಾಗಿ ಖರೀದಿಸುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದ್ದಾರೆ. ಜಿಲ್ಲೆಯ ಸುಮಾರು 10 ಖರೀದಿ ಕೇಂದ್ರಗಳಲ್ಲಿ ಈಗಾಗಲೇ ನೊಂದಣಿ ಮಾಡಿಸಿರುವ ರೈತರಿಂದ ನೇರವಾಗಿ ರಾಗಿಯನ್ನು ಖರೀದಿಸಲಾಗುತ್ತಿದ್ದು ರೈತ ಬಂಧುಗಳು ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
ವರದಿ ಕೊಟ್ಟ ಕರಿಯಣ್ಣ