ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮ ಪಂಚಾಯತಿಯಲ್ಲಿ ಇಂದು ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿಯನ್ನು ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಶೋಕ್ ಖಂಡೇಕರ್ ಅವರು ಮಾತನಾಡಿ ಇಡೀ ಮಾನವ ಕುಲಕ್ಕೆ ಸನ್ಮಾರ್ಗವನ್ನು ತಮ್ಮ ವಚನಗಳ ಮೂಲಕ ತೋರಿಸಿದ ಆದ್ಯವಚನಕಾರ ದೇವರ ದಾಸಿಮಯ್ಯ ಸರ್ವ ಸಮುದಾಯಗಳಿಗೆ ಮಾದರಿಯಾಗಿದ್ದಾರೆ. ಬಸವಾದಿ ಶರಣರ ವಚನಗಳು ಸಕಾರಾತ್ಮಕ ಬದಲಾವಣೆಗೆ ರಾಜ ಮಾರ್ಗ ಎಂಬುವುದು ಇದರಿಂದ ಸಾಬೀತಾಗುತ್ತದೆ ಎಂದು ಅಗರಖೇಡ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಶೋಕ್ ಖಂಡೇಕರ್ ಅವರು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಶೋಕ ಖಂಡೆಕರ್,ಉಪಾಧ್ಯಕ್ಷರಾದ ಶ್ರೀ ಭೀಮಾಶಂಕರ್ ಆಳೂರ,ಗ್ರಾಮ ಪಂಚಾಯತಿಯ ಬಿಲ್ ಕಲೆಕ್ಟರ್ ಸುಭಾಸ್ ತಮ್ಮಣ್ಣ ಸಿಂದೆ,ಗ್ರಾಮ ಪಂಚಾಯಿತಿಯ ಸದಸ್ಯರಾದ ಚಂದು ಬಡಿಗೇರ್, ಸಿಬ್ಬಂದಿವರಾದ ಮಲ್ಕಪ್ಪ ಲಚ್ಚಾಣ,ರಾಜಕುಮಾರ್ ರಾಥೋಡ್ ಉಪಸ್ಥಿತರಿದ್ದರು.
ವರದಿ-ಮನೋಜ ನಿಂಬಾಳ