ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಒಂದೇ ಒಂದು ಲೀಡ್ ಪಡೆದರೆ ನಾನು ರಾಜಕೀಯ ಕ್ಷೇತ್ರದಿಂದ ನಿವೃತ್ತನಾಗುತ್ತೇನೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆ ನೀಡಿದ್ದಾರೆ.ಸುಧಾಕರ್ ಅವರನ್ನು ಸಂಸತ್ತಿನ ಮೆಟ್ಟಿಲು ಹತ್ತಲು ಬಿಡುವುದಿಲ್ಲ.ಸುಧಾಕರ್ ಸೋತರೆ ತಮ್ಮ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಬಿಟ್ಟು ಕೊಡಬೇಕು ಎಂದು ಸವಾಲ್ ಹಾಕಿದ್ದಾರೆ ಅವರಲ್ಲಿ ತಾಕತ್ ದಮ್ ಇದ್ದರೆ ನನ್ನ ಸವಾಲನ್ನು ಸ್ವೀಕರಿಸಲಿ ಎಂದು ಹೇಳಿದ್ದಾರೆ.
ವರದಿ ಕೊಟ್ಟ ಕರಿಯಣ್ಣ