ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮರೆಯಾದ ದ್ವಾರಕೀಶ್

ಮೊಟ್ಟ ಮೊದಲ ಬಾರಿಗೆ ವಿದೇಶದಲ್ಲಿ ಚಿತ್ರೀಕರಣ ಮಾಡಿ ಕನ್ನಡ ಫಿಲಂ ಇಂಡಸ್ಟ್ರಿಯನ್ನು ಮೇಲೆತ್ತಿದ್ದ ನಟ,ನಿರ್ಮಾಪಕ ಹಾಗೂ ಹಾಸ್ಯ ಚಟಾಕಿ ಹಾರಿಸ್ತಿದ್ದ ಕರ್ನಾಟಕದ ಕುಳ್ಳ ದ್ವಾರಕೇಶ್ ಅವರ ಸೇವೆ ಕನ್ನಡ ಸಿನಿಮಾ ಕ್ಷೇತ್ರಕ್ಕೆ ಅನನ್ಯವಾದುದ್ದು.ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಮಿಂಚಿದ ದ್ವಾರಕೀಶ್​ ಇಂದು ಕಣ್ಮರೆಯಾಗಿದ್ದಾರೆ. ಅಭಿಮಾನಿಗಳನ್ನು ನಕ್ಕು-ನಲಿಸಿದ ಪ್ರಚಂಡ ಕುಳ್ಳ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.
ಕನ್ನಡದ ಬೆಳ್ಳಿ ತೆರೆಯಲ್ಲಿ ಕಪ್ಪು ಬಿಳುಪು ಯುಗದಲ್ಲೇ ಹತ್ತಾರು ಹೊಸ ಪ್ರಯೋಗಗಳನ್ನು ಮಾಡಿದ ಹರಿಕಾರ, ಹಾಸ್ಯ ಕಲಾವಿದ ದಿಗ್ಗಜರಿಂದ ಹಿಡಿದು ಹೊಸ ತಲೆಮಾರಿನವರ ಜತೆಗೂ ಸಿನಿರಂಗದಲ್ಲಿ ಹೆಜ್ಜೆ ಹಾಕಿದ ನಟ,ನಿರ್ಮಾಪಕ ದ್ವಾರಕೀಶ್‌ ನಿಧನರಾಗಿದ್ದು ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿಕೊಂಡಂತಾಗಿದೆ.ಇವರ ಆತ್ಮಕ್ಕೆ ಭಕ್ತಿಯ ನಮನಗಳು ಸಲ್ಲಿಸುತ್ತಾ,ಇವರ ಕುರಿತು ಇಲ್ಲಿ ಬರೆಯುವ ಯತ್ನ ಮಾಡಿರುತ್ತೇವೆ.

ದ್ವಾರಕೀಶ್ ಆಗಸ್ಟ್ 19,1942ರಂದು ಹುಣಸೂರು ನಲ್ಲಿ ಶಾಮರಾವ್ ಮತ್ತು ಜಯಮ್ಮ ದಂಪತಿಗಳ ಮಗನಾಗಿ ಜನಿಸಿದ ಶ್ರೀಯುತರು ಶಾರದಾ ವಿಲಾಸ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಪೂರೈಸಿದರು.
ನಂತರ CPC ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಪಡೆದುಕೊಂಡರು.ಅನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರು ಮಾಡಿದರು.ಆದರೆ ವ್ಯಾಪಾರ ವೃತ್ತಿಯಲ್ಲಿ ಅವರಿಗೆ ಹೆಚ್ಚು ಆಸಕ್ತ ಇಲ್ಲದ ಕಾರಣದಿಂದ ವ್ಯಾಪಾರ ಬಿಟ್ಟು
1963ರಲ್ಲಿ ಸಿನಿಮಾ ರಂಗವನ್ನು ಆಯ್ದುಕೊಂಡು, ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದರು.ತರುವಾಯ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್ ಪ್ರವೇಶ ಮಾಡಿ ಮಾಡಿ,ಯಶಸ್ವಿಯನ್ನು ಪಡೆದರು. ಮುಂದೆ 1966ರಲ್ಲಿ ಮಮತೆಯ ಬಂಧನ ಸಿನಿಮಾವನ್ನು ನಿರ್ಮಾಣ ಮಾಡಿದರು.1969ರಲ್ಲಿ ರಾಜ್‌ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಸಿನಿಮಾ ನಿರ್ಮಿಸುವ ಮೂಲಕ ಸ್ವತಂತ್ರ ನಿರ್ಮಾಪಕರಾಗಿ ಸೈ ಎನಿಸಿಕೊಂಡರು.
ಈ ಸಿನಿಮಾದ ಬಳಿಕ ಹಲವು ಸಿನಿಮಾಗಳನ್ನು ನಿರ್ಮಿಸಿ,ಅದರಲ್ಲಿ ಯಶಸ್ಸು ಪಡೆದ ದ್ವಾರಕೀಶ್ ಈವರೆಗೂ 40ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ.1985ರಲ್ಲಿ ಸಿನಿಮಾ ನಿರ್ದೇಶನಕ್ಕಿಳಿದ ದ್ವಾರಕೀಶ್,ಮೊದಲ ಬಾರಿ ‘ನೀ ಬರೆದ ಕಾದಂಬರಿ‘ ಎಂಬ ಚಿತ್ರವನ್ನು ನಿರ್ದೇಶಿಸಿದರು.ನಂತರ ಡ್ಯಾನ್ಸ್‌ ರಾಜಾ ಡ್ಯಾನ್ಸ್‌,ಶ್ರುತಿ,ರಾಯರು ಬಂದರು ಮಾವನ ಮನೆಗೆ ಸೇರಿದಂತೆ 15ಕ್ಕೂ ಹೆಚ್ಚು ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ.

ರಾಜ್‌ಕುಮಾರ್,ವಿಷ್ಣುವರ್ಧನ್‌ರಂತಹ ದಿಗ್ಗಜರ ಸಿನಿಮಾಗಳನ್ನು ನಿರ್ಮಿಸಿದ ಹೆಗ್ಗಳಿಕೆ ಹೊಂದಿದ್ದ ಅವರು ‘ದ್ವಾರಕೀಶ್ ಚಿತ್ರ’ ನಿರ್ಮಾಣ ಸಂಸ್ಥೆ ಮೂಲಕ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು.ಇವರು ಕನ್ನಡ ಮಾತ್ರವಲ್ಲದೇ, ತಮಿಳು, ಹಿಂದಿ ಸಿನಿಮಾಗಳನ್ನು ಕೂಡಾ ನಿರ್ಮಾಣ ಮಾಡಿ, ಎಲ್ಲರಿಂದಲೂ ಸೈ ಎನಿಸಿಕೊಂಡಿದ್ದಾರೆ.

ನಟನಾಗಿ:
1966ರಲ್ಲಿ ತುಂಗಾ ಬ್ಯಾನರ್ಸ್‌ನಡಿ ಮಮತೆಯ ಬಂಧನ ಎಂಬ ಸಿನಿಮಾದ ಸಹ ನಿರ್ಮಾಪಕರಾದರು. 1969ರಲ್ಲಿ ಮೇಯರ್‌ ಮುತ್ತಣ್ಣ ಮೂಲಕ ಮೊದಲ ಬಾರಿಗೆ ಸ್ವತಂತ್ರ ನಿರ್ಮಾಪಕರಾದರು.ಇದು ಡಾ.ರಾಜ್‌ಕುಮಾರ್‌ ಮತ್ತು ಭಾರತಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ ಸೂಪರ್‌ಹಿಟ್‌ ಸಿನಿಮಾ. ಮೇಯರ್‌ ಮುತ್ತಣ್ಣದ ಬಳಿಕ ಸ್ಯಾಂಡಲ್‌ವುಡ್‌ಗೆ ಹಲವು ಪ್ರಮುಖ ಸಿನಿಮಾಗಳನ್ನು ನೀಡಿದ್ದಾರೆ. ಬಹುತೇಕ ಎಲ್ಲಾ ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲಿ ಸಕ್ಸಸ್‌ ಆಗಿವೆ.1985ರಲ್ಲಿ ದ್ವಾರಕೀಶ್‌ ಸಿನಿಮಾ ನಿರ್ದೇಶನ ಆರಂಭಿಸಿದರು.ನೀ ಬರೆದ ಕಾದಂಬರಿ ಇವರು ನಿರ್ದೇಶನದ ಮೊದಲ ಸಿನಿಮಾ. ಇತರೆ ನಿರ್ಮಾಪಕರ ಸಿನಿಮಾಗಳಿಗೂ ಆಕ್ಷನ್‌ ಕಟ್‌ ಹೇಳಲು ಆರಂಭಿಸಿದರು. ಡ್ಯಾನ್ಸ್‌ ರಾಜಾ ಡ್ಯಾನ್ಸ್‌,ನೀ ಬರೆದ ಕಾದಂಬರಿ, ಶೃತಿ, ಶೃತಿ ಹಾಕಿದ ಹೆಜ್ಜೆ,ರಾಯರು ಬಂದರು ಮಾವನ ಮನೆಗೆ,ಕಿಲಾಡಿಗಳು ಸೇರಿದಂತೆ ಹಲವು ಸಿನಿಮಾಗಳಿಗೆ ನಿರ್ದೇಶನ ನೀಡಿದ್ದಾರೆ. ಇವರ ಕೆಲವೊಂದು ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲಿ ವಿಫಲವಾದವು ಇದು ಆರ್ಥಿಕವಾಗಿ ಇವರಿಗೆ ಹೊಡೆತವನ್ನು ನೀಡಿತ್ತು. ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಪ್ರತಿಭಾನ್ವಿತ ಕಲಾವಿದರನ್ನು ನೀಡಿದ್ದರು ಸಾಕಷ್ಟು ಹೊಸ ಡೈರೆಕ್ಟರ್‌ಗಳಿಗೆ ಅವಕಾಶ ನೀಡಿದ್ದರು. ಟೆಕ್ನಿಷಿಯನ್‌ಗಳಿಗೆ ಅವಕಾಶ ನೀಡಿದ್ದರು.ಚೌಕ ಇವರ ಇತ್ತೀಚಿನ ಮತ್ತು ಕೊನೆಯ ಸಿನಿಮಾ. 2004ರಲ್ಲಿ ಆಪ್ತಮಿತ್ರ ಸಿನಿಮಾ ನಿರ್ಮಾಣ ಮಾಡಿದ್ದರು. ಇದು ಬಾಕ್ಸ್‌ ಆಫೀಸ್‌ನಲ್ಲಿ ಸೂಪರ್‌ಹಿಟ್‌ ಆಗಿತ್ತು.ನಟರಾಗಿ,ಹಾಸ್ಯ ಕಲಾವಿದರಾಗಿ,ಪೋಷಕ ನಟನಾಗಿ ದ್ವಾರಕೀಶ್‌ ನೂರಾರು ಸಿನಿಮಾಗಳಲ್ಲಿ ನಟಿಸಿದರು.ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು.ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್–ವಿಷ್ಣು ಹಲವಾರು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದರು. ಇವರು ಅಭಿನಯದ ಸಿನಿಮಾಗಳು ಸೂಪರ್‌ ಹಿಟ್‌ ಆಗಿದ್ದವು .

ದಿಗ್ಗಜರೊಂದಿಗೆ:ರಾಜ್‌ಕುಮಾರ್, ವಿಷ್ಣುವರ್ಧನ್‌ರಂತಹ ದಿಗ್ಗಜರ ಸಿನಿಮಾಗಳನ್ನು ನಿರ್ಮಿಸಿದ ಹೆಗ್ಗಳಿಕೆ ಹೊಂದಿದ್ದ ಅವರು ‘ದ್ವಾರಕೀಶ್ ಚಿತ್ರ’ ನಿರ್ಮಾಣ ಸಂಸ್ಥೆ ಮೂಲಕ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು.ಇವರು ಕನ್ನಡ ಮಾತ್ರವಲ್ಲದೇ,ತಮಿಳು,ಹಿಂದಿ ಸಿನಿಮಾಗಳನ್ನು ಕೂಡ ನಿರ್ಮಾಣ ಮಾಡಿದ್ದಾರೆ.ಚಿತ್ರ ನಿರ್ಮಾಣ, ನಿರ್ದೇಶನದಲ್ಲೂ ಹೆಸರು ಮಾಡಿದ್ದ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದರು. ಹಾಗೂ ಚಂದನವನದಲ್ಲಿ ಹಲವು ದಿಗ್ಗಜ ನಟರೊಂದಿಗೆ ನಟಿಸಿ ಅವರು ಜನಪ್ರಿಯತೆ ಪಡೆದಿದ್ದರು.ನಟರಾಗಿ, ನಿರ್ದೇಶಕ, ನಿರ್ಮಾಪಕರಾಗಿ ಹಲವಾರು ಚಿತ್ರಗಳ ಕೊಡುಗೆ ನೀಡಿರುವ ಅವರು ಕನ್ನಡ ಚಿತ್ರರಂಗಕ್ಕೆ ಕಲಾಸೇವೆ ಸಲ್ಲಿಸಿದ್ದಾರೆ. ಕನ್ನಡದ ಹಿರಿಯ ಮೇರು ನಟರೊಂದಿಗೆ ಹಿರಿಯ ತೆರೆಯಲ್ಲಿ ಮಿಂಚಿರುವ ನಟ ದ್ವಾರಕೀಶ್‌ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. 40ಕ್ಕೂ ಹೆಚ್ಚು ಸಿನಿಮಾಗಳ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಅವರು ಕನ್ನಡ ಜನತೆಗೆ ಪ್ರಚಂಡಕುಳ್ಳ ಎಂದೇ ಜಗತ್ಪ್ರಸಿದ್ಧನಾಗಿದ್ದರು.

ನಟ ದ್ವಾರಕೀಶ್‌ ಅವರು ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದರಿಂದ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್‌ ನೀಡಿ ಸನ್ಮಾನಿಸಿರುವುದು ಐತಿಹಾಸಿಕ.

ಗೌರವ ನಮನಗಳು:
ಕನ್ನಡ ಚಿತ್ರರಂಗದ ಮೇರು ನಟ ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದು, ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ವಿಶಿಷ್ಟ ಕೊಡುಗೆ ನೀಡಿ, ಇಂದು ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ್ದಾರೆ.ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬವರ್ಗದವರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಆಶಿಸುತ್ತಾ, ಶ್ರೀಯುತರಿಗೆ ಹೃದಯಸ್ಪರ್ಶಿ, ಭಕ್ತಿಯ ನಮನಗಳು ಸಲ್ಲಿಸುತ್ತೇವೆ.

-ಸಂಗಮೇಶ ಎನ್ ಜವಾದಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ