ಸಂಸತ್ ಸ್ಥಾನಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ
ಕೊಪ್ಪಳ:ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆ ಸಂಸತ್ ಸದಸ್ಯ ಸ್ಥಾನ ಹಾಗೂ ಬಿಜೆಪಿಗೂ ರಾಜೀನಾಮೆ ನೀಡಿದ್ದೇನೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ಈ ಕುರಿತು ಪ್ರಕಟಣೆ ನೀಡಿದ ಅವರು,ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಇ-ಮೇಲ್ ಮೂಲಕ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪತ್ರ ಕಳುಹಿಸಿದ್ದೇನೆ ಎಂದರು.
ಕಳೆದ 10 ವರ್ಷದಿಂದ ಕೊಪ್ಪಳ ಲೋಕಸಭಾ ಕ್ಷೇತ್ರದ ಜನರ ಆಶೀರ್ವಾದ ದಿಂದ ಸಂಸದನಾಗಿ ಕೆಲಸ ಮಾಡಿದ್ದೇನೆ.ನಾನು ಸಂಸದನಾಗುವ ಮೊದಲು ರೈಲ್ವೆ, ಹೆದ್ದಾರಿ ಹಾಗೂ ಕೇಂದ್ರ ಸರ್ಕಾರ ಸರ್ಕಾರದ ಯೋಜನೆಗಳು ಜನರಿಗೆ ನಿರೀಕ್ಷಿತ ಮಟ್ಟದಲ್ಲಿ ತಲುಪಿರಲಿಲ್ಲ.ನಾನು ಸಂಬಂಧಿಸಿದ ಕೇಂದ್ರ ಸಚಿವರುಗಳಿಗೆ ಪತ್ರದ ಮೂಲಕ ಹಾಗೂ ಮೂಖತಃ ಭೇಟಿಯಾಗಿ ಕೊಪ್ಪಳ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಕಾಮಗಾರಿ ತಂದಿರುವ ಹೆಮ್ಮೆ ನನಗಿದೆ. ಆದರೆ,ಇತ್ತೀಚಿನ ರಾಜಕಾರಣ ನನಗೆ ಬೇಸರ ತರಿಸಿದ್ದು,ನನ್ನ ಸಾರ್ವಜನಿಕರ ಸೇವೆ ಗುರುತಿಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ ಎಂದರು.