ಮತದಾನ ಜಾಗೃತಿಗಾಗಿ ಕಾರಟಗಿ ನಗರದಲ್ಲಿ ಕ್ಯಾಂಡಲ್ ಮಾರ್ಚ್ ಕಾರ್ಯಕ್ರಮ
ಕಾರಟಗಿ:ಪ್ರಜಾಪ್ರಭುತ್ವದ ಆಶಯಕ್ಕೆ ಮತದಾನ ಅಡಿಪಾಯವಾಗಿದ್ದು ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನಾವೆಲ್ಲರೂ ತಪ್ಪದೇ ಮತದಾನ ಮಾಡೋಣ ಎಂದು ಕಾರಟಗಿ ತಹಶಿಲ್ದಾರರಾದ ಎಂ.ಕುಮಾರಸ್ವಾಮಿ ಅವರು ಹೇಳಿದರು.
ಪಟ್ಟಣದ ಪುರಸಭಾ ಕಾರ್ಯಾಲಯದಿಂದ ಕನಕದಾಸ ವೃತದೊರಗೆ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿಗಾಗಿ ಗುರವಾರ ಸಂಜೆ ಆಯೋಜಿಸಿದ್ದ ಕ್ಯಾಂಡಲ್ ಮಾರ್ಚ್ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮತದಾನ ಎಂಬುದು ಪ್ರತಿಯೊಬ್ಬ ಅರ್ಹ ಮತದಾರನ ಆದ್ಯ ಕರ್ತವ್ಯವಾಗಿದೆ.ಮತದಾನದ ದಿನದಂದು ಪ್ರತಿಯೊಬ್ಬ ಅರ್ಹ ಮತದಾರನ್ನು ತಮ್ಮ ಹಕ್ಕನ್ನು ಚಲಾಯಿಸಲು ಮುಂದಾಗುವಂತೆ ತಿಳಿಸಿದರು.
ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರಾದ ಲಕ್ಷ್ಮೀದೇವಿ ಮೇಡಂ ಅವರು ಮಾತನಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತ ಚಲಾಯಿಸಿ,ಮತದಾರರು ಯಾವುದೇ ಆಮಿಷುಗಳಿಗೆ ಒಳಗಾಗದೇ ತಮ್ಮ ಹಕ್ಕನ್ನು ಚಲಾಯಿಸಿ ಸಧೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗುವಂತೆ ಅವರು ತಿಳಿಸಿದರು.
ಪುರಸಭೆ ಮುಖ್ಯಾಧಿಕಾರಿ ಸುರೇಶ್ ಎಸ್.ಅವರು ಮಾತನಾಡಿ ಮೇ 07 ರಂದು ಲೋಕಸಭಾ ಚುನಾವಣೆ ಮತದಾನ ನಡೆಯಲಿದೆ.ಯಾರೂ ಕೂಡಾ ಆ ದಿನ ಬೇರೆಡೆ ಊರಿಗೆ ತೆರಳದೆ ಕಡ್ಡಾಯವಾಗಿ ಮತ ಚಲಾಯಿಸಬೇಕು.
ಕ್ಯಾಂಡಲ್ ಮಾರ್ಚ್ ಜಾಥಾ:ನಗರದ ಪುರಸಭಾ ಕಾರ್ಯಾಲಯದಿಂದ ಮುಖ್ಯ ರಸ್ತೆಯ ಮೂಲಕ ಕನಕದಾಸ ವೃತ್ತದೊರಗೆ ವಾಹನದಲ್ಲಿ ಮತದಾನದ ಜಿಂಗಲ್ಸ್ ಗಳನ್ನು ಪ್ರಸಾರ ಮಾಡುತ್ತಾ,ಜಾಗೃತಿ ಫಲಕ ಹಾಗೂ ಮೇಣದಬತ್ತಿ ಹಿಡಿದು ಜಾಗೃತಿ ಮೂಡಿಸಲಾಯಿತು,ನಂತರ ಮತದಾನ ಮಹತ್ವದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಜಿಲ್ಲಾ ಚುನಾವಣಾ ರಾಯಭಾರಿಗಳಾದ ಡಾ.ಶಿವಕುಮಾರ್ ಮಾಲಿಪಾಟೀಲ್,ಮಹೆಬೂಬ್ ಕಿಲ್ಲೇದಾರ್ ಹಾಗೂ ಕುಮಾರಿ ರಮ್ಯಾ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷರಾದ
ಸಂಗಮ್ಮ ಹೀರೆಮಠ,ತಾ.ಪಂ ಸಹಾಯಕ ನಿರ್ದೇಶಕರಾದ ವೈ.ವನಜಾ ಮೇಡಂ,ತಾಲೂಕು ಮಟ್ಟದ ಅಧಿಕಾರಿಗಳು,ಸಿಬ್ಬಂದಿಗಳು ವರ್ಗದವರು ಭಾಗವಹಿಸಿದ್ದರು.