ಹನೂರು:ಡಾ.ಬಿ.ಅರ್.ಅಂಬೇಡ್ಕರ್ ಅವರ ಆಶಯದಂತೆ ನಡೆಯುವುದರ ಜೊತೆಗೆ ಸಂವಿಧಾನದ ಉಳಿವಿಗೆ ಕಾಂಗ್ರೆಸ್ ಬೆಂಬಲಿಸಬೇಕು ಇಲ್ಲದಿದ್ದರೆ ನಮ್ಮ ಬದುಕು ಪುನಃ ಗುಲಾಮಗಿರಿಗೆ ಹೋಗುತ್ತದೆ ಹಾಗಾಗಿ ಪ್ರಜ್ಞಾವಂತರಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ಹನೂರು ಪಟ್ಟಣ ಸೇರಿದಂತೆ ಮದುವನಹಳ್ಳಿ ಬಂಡಳ್ಳಿ ಚಿಕ್ಕಲ್ಲೂರು ಹಾಗೂ ಇನ್ನಿತರ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿ ಮಾತನಾಡಿದವರು ಸಂವಿಧಾನವನ್ನು ಉಳಿಸಲು ನಾವೆಲ್ಲರೂ ಒಂದಾಗಬೇಕು ಸ್ವಾಭಿಮಾನಿ ಮತದಾರರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರನ್ನು ಬೆಂಬಲಿಸಿ ಆಶೀರ್ವದಿಸಬೇಕು.
ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಸಹಿತ ನಾವು ಸರ್ಕಾರದ ಪರವಾಗಿ ನಾವೆಲ್ಲರೂ ಈ ಜಿಲ್ಲೆಯನ್ನು ಅಭಿವೃದ್ಧಿ ಮಾಡಲು ಪಣ ತೊಟ್ಟಿದ್ದೇವೆ ಇದರಿಂದ ತಾವು ನಮಗೆ ಸೇವೆ ಮಾಡುವ ಅವಕಾಶ ಮಾಡಿಕೊಡಬೇಕು.
ಈ ಹಿಂದೆಯೂ ಹನೂರು ವಿಧಾನ ಸಭಾ ಕ್ಷೇತ್ರದಲ್ಲಿ ಶಾಸಕ ನರೇಂದ್ರರವರ ಮುಂದಾಳತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಬಂಧುಗಳು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷಕ್ಕೆ ಲೀಡ್ ಕೊಟ್ಟಿದೆ ಈ ಬಾರಿಯೂ ಲೀಡ್ ಕೊಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತ ಬಂಧುಗಳಲ್ಲಿ ಕೈಮುಗಿದು ಬೇಡಿಕೊಂಡರು.
ನಮ್ಮ ಸರ್ಕಾರ ಅತ್ಯಂತ ಯಶಸ್ವಿಯಾಗಿ ಕೊಟ್ಟ ಮಾತಿಗೆ ನಡೆದುಕೊಂಡ ಸರ್ಕಾರವಾಗಿದೆ ಕೇವಲ ಭರವಸೆಗಳನ್ನು ಕೊಟ್ಟು ಸುಮ್ಮನಿಲ್ಲ ಹಾಗಾಗಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ಕಾರ್ಯಕರ್ತರ ಪಾತ್ರ ಪ್ರಮುಖವಾಗಿದೆ ಹಾಗಾಗಿ ನಮ್ಮ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಬೇಕು ಆ ಮೂಲಕ ನಮ್ಮ ಜನರನ್ನು ಎಚ್ಚರಗೊಳಿಸಬೇಕು ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಹಾಗಾಗಿ ಕಾಂಗ್ರೇಸ್ ಪಕ್ಷವನ್ನು ಬೆಂಬಲಿಸಿ.
ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಕಾಂಗ್ರೆಸ್ ನೇತೃತ್ವದಲ್ಲಿ ಕೊಟ್ಟ ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಈಗಲೂ ಸಹ 5 ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ನಮ್ಮ ಸರ್ಕಾರ ಅತ್ಯಂತ ಯಶಸ್ವಿಯಾಗಿ ಕೊಟ್ಟ ಮಾತಿಗೆ ನಡೆದುಕೊಂಡ ಸರ್ಕಾರವಾಗಿದೆ ಕೇವಲ ಭರವಸೆಗಳನ್ನು ಕೊಟ್ಟು ಸುಮ್ಮನಿಲ್ಲ ಹಾಗಾಗಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ಕಾರ್ಯಕರ್ತರ ಪಾತ್ರ ಪ್ರಮುಖವಾಗಿದೆ ಹಾಗಾಗಿ ನಮ್ಮ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಬೇಕು ಆ ಮೂಲಕ ನಮ್ಮ ಜನರನ್ನು ಎಚ್ಚರಗೊಳಿಸಬೇಕು ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಹಾಗಾಗಿ ಕಾಂಗ್ರೇಸ್ ಪಕ್ಷವನ್ನು ಬೆಂಬಲಿಸಿ.
ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಕಾಂಗ್ರೆಸ್ ನೇತೃತ್ವದಲ್ಲಿ ಕೊಟ್ಟ ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಈಗಲೂ ಸಹ 5 ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ತಿಳಿಸಿದರು.
ಅಭ್ಯರ್ಥಿ ಸುನಿಲ್ ಬೋಸ್ ಮಾತನಾಡಿ ನಮ್ಮ ಕಾಂಗ್ರೇಸ್ ಸರ್ಕಾರ ಬಡವರ ಪರ,ರೈತರ ಪರ ದೀನ ದಲಿತರ ಪರವಾದ ಸರ್ಕಾರವಾಗಿದೆ ಆದ್ರಿಂದ ತಮ್ಮ ಅಮೂಲ್ಯವಾದ ಮತಗಳನ್ನು ಆಶೀರ್ವದಿಸಬೇಕು ಎಂದು ತಿಳಿಸಿದರು.ಶಾಸಕ ನರೇಂದ್ರ ರವರು ಮಾತನಾಡಿ ಕಳೆದ ಬಾರಿ ಚುನಾವಣೆಯಲ್ಲಿ 15 ಸಾವಿರಕ್ಕೆ ಹೆಚ್ಚು ಮತಗಳನ್ನು ನೀಡಿದ ನಮ್ಮ ಕಾಂಗ್ರೆಸ್ ಕಾರ್ಯಕರ್ತ ಬಂಧುಗಳಿಗೆ ಈ ಬಾರಿಯೂ ಅತ್ಯಧಿಕ ಬಹುಮತಗಳನ್ನು ನೀಡಿ ಸುನಿಲ್ ಬೋಸರವನ್ನು ಗೆಲ್ಲಿಸಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು
ಮತ್ತು ನನ್ನ ತಂದೆ ದೇವಂಗತ ರಾಜು ಗೌಡ್ರು ಕ್ಷೇತ್ರಕ್ಕೆ ಅಪಾರವಾದ ಕೊಡುಗೆಗಳನ್ನು ಕೊಟ್ಟಿದ್ದಾರೆ ಅದರಂತೆ ನಾನು ಸಹ ನನ್ನ ಅಧಿಕಾರ ಅವಧಿಯಲ್ಲಿ ಅನೇಕ ಜನಪರ ಕೆಲಸ ಕಾರ್ಯಗಳನ್ನು ಮಾಡಿದ್ದೇನೆ ಅದು ನನಗೆ ತೃಪ್ತಿ ತಂದಿದೆ ಎಂದರು.
ಕೊಳ್ಳೇಗಾಲ ಮಾಜಿ ಶಾಸಕ ನಂಜುಂಡ ಸ್ವಾಮಿ, ಮಾಜಿ ಸಂಸದ ಶಿವಣ್ಣ,ನವನೀತ್ ಗೌಡ ವಿವಿಧ ಗ್ರಾಮದ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತ ಮುಖಂಡರುಗಳು ಹಾಜರಿದ್ದರು.
ವರದಿ:ಉಸ್ಮಾನ್ ಖಾನ್