ಬೀದರ್/ಬಸವಕಲ್ಯಾಣ:ಹುಬ್ಬಳ್ಳಿಯಲ್ಲಿ ನಡೆದ ವಿಧ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣ ಖಂಡಿಸಿ ಬಸವಕಲ್ಯಾಣ ನಗದಲ್ಲಿ ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಬಸವಕಲ್ಯಾಣ ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ನಗರದ ಗಾಂಧಿ ವೃತ್ತದಿಂದ ಮುಖ್ಯ ರಸ್ತೆಯ ಮೂಲಕ ಅಂಬೇಡ್ಕರ್ ವೃತ್ತದವರೆಗೆ ಮೇಣದಬತ್ತಿಯೊಂದಿಗೆ ಪ್ರತಿಭಟನೆ ನಡೆಸಿದರು. ನಗರದ ಅಂಬೇಡ್ಕರ್ ವೃತ್ತದಲ್ಲಿ ಸಂಚಾರ ಬಂದ್ ಮಾಡುವ ಮೂಲಕ ಪ್ರತಿಭಟನೆ ನಡೆಸಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಖಂಡಿಸಿ ಆರೋಪಿಗೆ ಕೂಡಲೇ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಸರ್ಕಾರಕ್ಕೆ ಸಲ್ಲಿಸಿದ ಮನವಿ ಪತ್ರದಲ್ಲಿ ಒತ್ತಾಯಿಸಲಾಯಿತು ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಅವರ ಮೂಲಕ ರಾಜ್ಯ ಪಾಲರಿಗೆ ಬರೆದ ಮನವಿ ಪತ್ರ ಸಲ್ಲಿಸಲಾಯಿತು ಸ್ಥಳೀಯ ಶಾಸಕರಾದ ಶ್ರೀ ಶರಣು ಸಲಗರ್ ಅವರು ಮಾತನಾಡಿ ಆರೋಪಿಗೆ ಗಲ್ಲು ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು.ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಷಯವನ್ನು ಮುಂಬರುವ ದಿನಗಳಲ್ಲಿ ವಿಧಾನಸಭೆಯ ಅಧಿವೇಶನದಲ್ಲಿ ಸರ್ಕಾರವನ್ನು ಪ್ರಶ್ನಿಸಲಾಗುವುದು ಎಂದು ಅವರು ತಿಳಿಸಿದರು.ಈ ಸಂದರ್ಭದಲ್ಲಿ ತ್ರಿಪುರಾಂತ್ ಗವಿ ಮಠದ ಪೀಠಾಧಿಪಿಗಳಾದ ಡಾ.ಅಭಿನವ್ ಘನಲಿಂಗ ರುದ್ರಮುನಿ ಶಿವಾಚಾರ್ಯರು,ಡಾ.ಬಸವರಾಜ್ ಸ್ವಾಮಿ, ಮಹಾಂತಯ್ಯ ಸ್ವಾಮಿ ನಾರಾಯಣಪೂರ್,ಹಿಂದೂ ಪರ ಹೋರಾಟಗಾರ ರವಿ ನಾವದ್ಗೆಕರ್,ಕೃಷ್ಣ ಗೋನೆ, ಆಕಾಶ್ ಖಂಡಾಳೆ,ಸೂರ್ಯಕಾಂತ್ ಚಿಲ್ಲಾಭಟ್ಟೆ,ಶಾಂತ್ವೀರ್ ಸ್ವಾಮಿ,ರಾಕೇಶ್ ಸೇರಿದಂತೆ ಮಹಿಳೆಯರು,ಯುವಕರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
ವರದಿ:ಸಂದೀಪ್ ಕುಮಾರ್