ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ:ಕಠಿಣ ಶಿಕ್ಷೆ ವಿಧಿಸಲು ರವಿ ಸಿಂಗೆ ಆಗ್ರಹ

ಕಲಬುರಗಿ:ಹುಬ್ಬಳ್ಳಿಯ ಬಿವಿಬಿ ಕಾಲೇಜ್ ವಿದ್ಯಾರ್ಥಿನಿ ನೇಹಾಳ ಹಿರೇಮಠ ರವರ ಭೀಕರ ಕೊಲೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಮುಖಂಡ ರವಿ ಸಿಂಗೆ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್ ನಲ್ಲಿ ಹಾಡು ಹಗಲೇ ನಡೆದ ವಿದ್ಯಾರ್ಥಿನಿ ನೇಹಾಳ ಹಿರೇಮಠ ರವರ ಭೀಕರ ಹತ್ಯೆ ಅತ್ಯಂತ ಖಂಡನೀಯ,ಸರ್ಕಾರ ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಮುಂದಾಗುವುದನ್ನು ಬಿಟ್ಟು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಇಲ್ಲಸಲ್ಲದ ಹೇಳಿಕೆ ನೀಡುತ್ತಾ ಸಮಯ ಹಾಳು ಮಾಡುತ್ತಾ ಹೊರಟ್ಟಿದ್ದಾರೆ.ನೇಹಾಳ ತಂದೆ ನಾವು ಕಷ್ಟದಲ್ಲಿ ಇದ್ದೇವೆ ನಾನು ಒಬ್ಬ ಕಾಂಗ್ರೆಸ್ ನ ಕಾರ್ಪೊರೇಟರ್ ಕಾರ್ಯಕರ್ತನಾಗಿದ್ದರು ಕೂಡಾ ನಮಗೆ ನಮ್ಮ ಸರ್ಕಾರ ಇದ್ದರು ಕೂಡಾ ನಮ್ಮ ಸರ್ಕಾರದಿಂದ ನನ್ನ ಮಗಳಿಗೆ ನ್ಯಾಯ ಕೊಡಿಸಲು ನಮ್ಮ ಸರ್ಕಾರ ಮುಂದಾಗಲಿಲ್ಲ.ಮುಖ್ಯಮಂತ್ರಿಗಳು ವೈಯಕ್ತಿಕ ವಿಚಾರ ಎಂದು ಹೇಳಿಕೆ ಕೊಟ್ಟರೆ. ಗೃಹ ಸಚಿವರು ಏನೆಲ್ಲಾ ಇಲ್ಲಸಲ್ಲದ ಹೇಳಿಕೆ ನೀಡುತ್ತಾ ಬರುತ್ತಿದ್ದಾರೆ.ರಾಜ್ಯದಲ್ಲಿ ನೇಹಾಳಿಗೆ ನ್ಯಾಯ ಸಿಗಬೇಕೆಂದು ಅವರ ಪರವಾಗಿ ಸಮಾಜದ ಮುಖಂಡರು ಸಂಘ ಸಂಸ್ಥೆಗಳು ರಾಜ್ಯದಲ್ಲಿ ಪ್ರತಿಭಟನೆ ನಡೆಯುತ್ತಲೇ ಇದ್ದರು ಕೂಡಾ ರಾಜ್ಯದ ಕೆಲವ ಒಂದು ಸಚಿವರು ಇಲ್ಲಸಲ್ಲದ ಹೇಳಿಕೆ ನೀಡುತ್ತಾ ಬರುತ್ತಿದ್ದಾರೆ.ಇಲ್ಲಸಲ್ಲದ ಹೇಳಿಕೆ ನೀಡುವುದನ್ನು ಬಿಟ್ಟು ಕೋಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್ ನ್ಯಾಯಾಲಯದಲ್ಲಿ ವಿಚಾರಣೆ ಮಾಡಿ ಕೋರ್ಟ್ ನ್ಯಾಯಾಲಯದಲ್ಲಿ ಚರ್ಚಿಸಿ ನಂತರ ಯಾರೆ ತಪ್ಪು ಮಾಡಿರಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಕೋರ್ಟ್ ನ್ಯಾಯಮೂರ್ತಿ ಕಾನೂನು ಮೂಲಕ ಕಠಿಣ ಶಿಕ್ಷೆ ವಿಧಿಸಲು ಮುಂದಾಗಬೇಕೆಂದು ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಮಹಿಳೆಯರ ಮೇಲೆ ದೌರ್ಜನ್ಯ,ಶೋಷಣೆ,ಕೊಲೆಗಳು ದಿನೇ ದಿನೇ ಹೆಚ್ಚುತ್ತಿದ್ದು ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ,ರಕ್ಷಣೆ ಇಲ್ಲದೆ ಇರುವುದು ಈ ಘಟನೆಗಳಿಗೆ ಕಾರಣವಾಗಿವೆ.ಹುಬ್ಬಳ್ಳಿ ವಿದ್ಯಾನಗರದ ಕೆಎಲ್‌ಇಯ ಅಡಿಯಲ್ಲಿ ಬರುವ ಕರ್ನಾಟಕ ಲಿಂಗಾಯತ ಶಿಕ್ಷಣ ತಾಂತ್ರಿಕ ವಿಶ್ವವಿದ್ಯಾನಿಲಯ (ಬಿವಿಬಿ) ಆವರಣದಲ್ಲಿ ಗುರುವಾರ ರಂದು ಎಂಸಿಎ ಮೊದಲ ವರ್ಷದಲ್ಲಿ ಓದುತ್ತಿದ್ದ ನೇಹಾ ಹಿರೇಮಠ (24) ಎಂಬ ವಿದ್ಯಾರ್ಥಿನಿಯನ್ನು ಹಾಡಹಗಲೆ ತನ್ನ ಹಳೆಯ ಸಹಪಾಠಿ ಚಾಕುವಿನಿಂದ ಕೊಲೆಮಾಡಿ ಹತ್ಯೆಗೈದಿರುವುದು ಅತ್ಯಂತ ಖಂಡನೀಯ ಎಂದರು. ರಾಜ್ಯ ಸರ್ಕಾರ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥ ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದರು.
ಈ ಪ್ರಕರಣಗಳು ರಾಜ್ಯಾದ್ಯಂತ ಪ್ರತಿ ದಿನವೂ ನಡೆಯುತ್ತಿದ್ದು ಸರ್ಕಾರ ಇವುಗಳ ಬಗ್ಗೆ ಗಮನ ನೀಡದೆ ಇರುವುದು ಈ ರೀತಿಯ ಘಟನೆಗಳು ಹೆಚ್ಚಾಗಿವೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಎಲ್ಲಾ ಶಾಲಾ – ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ,ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು ಇಷ್ಟಾದರೂ ಕೂಡಾ ರಾಜ್ಯ ಸರ್ಕಾರ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ಜಾರಿ ಮಾಡಿಲ್ಲ.ತಕ್ಷಣ ಇದನ್ನು ಜಾರಿ ಮಾಡಬೇಕು. ಇಂತ ಆರೋಪಿಗಳಿಗೆ ಕಾನೂನು ಕಠಿಣ ಶಿಕ್ಷೆ ವಿಧಿಸಿ ಇಂತವರನ್ನು ಗಲ್ಲಿಗೆ ಏರಿಸಿ ರಾಜ್ಯದ ವಿದ್ಯಾರ್ಥಿನಿಯರಿಗೆ,ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ