ಬೀದರ್:ಲೋಕಸಭಾ ಚುನಾವಣೆ ನಿಮಿತ್ತ ಇಂದು ಔರಾದ್ ವಿಧಾನಸಭಾ ಕ್ಷೇತ್ರದಲ್ಲಿ ಹಿರಿಯ ಮುಖಂಡರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಮಾವೇಶ ಹಮ್ಮಿಕೊಳ್ಳಲಾಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿ ಬೀದರ್ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ಅನುದಾನ ತಂದಿದ್ದು,ಕ್ಷೇತ್ರವು ಸರ್ವೋತೋಮುಖ ಅಭಿವೃದ್ಧಿ ಪಥದಲ್ಲಿ ಸಾಗಿದೆ. 3ನೇ ಬಾರಿಗೆ ಲೋಕಸಭೆಗೆ ಆಯ್ಕೆಯಾದ ಮೇಲೆ ಮುಂದಿನ 5 ವರ್ಷಗಳಲ್ಲಿ ಬೀದರ್ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿ ಹೊಂದಿದ ಜಿಲ್ಲೆಯನ್ನಾಗಿಸುತ್ತೇನೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ರವರು ನುಡಿದರು. ಹಾಗೂ ಸಭೆಯನ್ನು ಉದ್ದೇಶಿಸಿ,ನಮ್ಮ ಹೆಮ್ಮೆಯ ನಾಯಕರಾದ ಶ್ರೀ ನರೇಂದ್ರ ಮೋದಿ ಜೀ ಅವರನ್ನು ಮತ್ತೊಮ್ಮೆ ಪ್ರಧಾನಮಂತ್ರಿಗಳನ್ನಾಗಿ ಮಾಡಿ ಸದೃಢ ಭಾರತ ನಿರ್ಮಾಣಕ್ಕೆ ಕೈ ಜೋಡಿಸೋಣ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಶೈಲೇಂದ್ರ ಬೆಲ್ದಾಳೆ,ಶಾಸಕರಾದ ಶ್ರೀ ಸಿದ್ದು ಪಾಟೀಲ್,ಶಾಸಕರಾದ ಶ್ರೀ ಅವಿನಾಶ್ ಜಾಧವ, ಜಿಲ್ಲಾಧ್ಯಕ್ಷರಾದ ಶ್ರೀ ಸೋಮನಾಥ್ ಪಾಟೀಲ್,ಶ್ರೀ ಉಮಾಕಾಂತ್ ನಾಗಮಾರಪಳ್ಳಿ, ಶ್ರೀ ಸೂರ್ಯಕಾಂತ್ ನಾಗಮಾರಪಳ್ಳಿ,ಶ್ರೀ ಡಿ.ಕೆ.ಸಿದ್ರಾಮ್,ಶ್ರೀ ಬಸವರಾಜ್ ಆರ್ಯ,ಶ್ರೀ ರಪೋದ್ದಿನ್ ಕಚೋರಿವಾಲಾ,ಶ್ರೀ ಕಿರಣ ಪಾಟೀಲ್,ಮುಖಂಡರು,ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ವರದಿ:ರೋಹನ್ ವಾಘಮಾರೆ