ಕಲಬುರಗಿ/ಚಿತ್ತಾಪುರ:ಕ್ಷೇತ್ರದೆಲ್ಲೆಡೆ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಮನಿ ಅವರ ಪರ ಜನರ ಒಲವು ಹೆಚ್ಚಾಗಿದೆ ಎಂದು ಕಾಂಗ್ರೆಸ್ ಮುಖಂಡ ಮೋಸಿನ್ ಚೈನೋ ತಿಳಿಸಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಚಿತ್ತಾಪುರ ಪಟ್ಟಣ,ಎಲ್ಲಾ ಗ್ರಾಮ, ತಾಂಡಾಗಳಲ್ಲಿ ಅಬ್ಬರದ ಪ್ರಚಾರ ನಡೆಸಲಾಗಿದೆ.ಎಲ್ಲಾ ಕಡೆಗಳಲ್ಲಿ ಜನ ನಮ್ಮ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ನೀಡುತ್ತಿದ್ದಾರೆ.ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ 5 ವರ್ಷ ಕಲಬುರಗಿ ಸಂಸದರಾಗಿ ಯಾವುದೇ ಯೋಜನೆ ಮಂಜೂರಿಗೊಳಿಸಿಲ್ಲ.ಯುವಕರಿಗೆ ಉದ್ಯೋಗ,ರೈತರಿಗೆ ಸಹಾಯ ಮಾಡಲಿಲ್ಲ ಎಂದು ಟೀಕಿಸಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದಾಗಿನಿಂದ ಜನರಿಗೆ ಸುಳ್ಳು ಭರವಸೆ ನೀಡಿ ಯಾವುದೇ ಅಭಿವೃದ್ಧಿ ಕೆಲಗಳನ್ನು ಮಾಡಿಲ್ಲ.ಹೀಗಾಗಿ ಹತ್ತು ವರ್ಷದಲ್ಲಿ ದೇಶದಲ್ಲಿ ಏನೆಲ್ಲಾ ಘಟನೆಗಳು ನಡೆದಿವೆ ಎನ್ನುವುದನ್ನು ಮನದಲ್ಲಿಟ್ಟುಕೊಂಡು ಮತದಾನ ಮಾಡಬೇಕು ಮತದಾನ ಮಾಡದೇ ದೂರ ಇರುವುದು ಸರಿಯಲ್ಲ.ಹೀಗಾಗಿ ಮತಗಟ್ಟೆಗಳಿಗೆ ಬಂದು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.
ವರದಿ ಮೊಹಮ್ಮದ್ ಅಲಿ ಚಿತ್ತಾಪುರ




















