ಸಿಂಧನೂರು:ಇಂದು ವನಸಿರಿ ಫೌಂಡೇಶನ್ ವತಿಯಿಂದ ಮರುಜೀವ ಪಡೆದ ಆಲದ ಮರಕ್ಕೆ ಇದೇ ನವೆಂಬರ್ 25 ರಂದು ಕೊಪ್ಪಳದ ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಆಗಮನದ ಹಿನ್ನಲೆಯಲ್ಲಿ ವನಸಿರಿ ಫೌಂಡೇಶನ್ ಕಾರ್ಯ ಚಟುವಟಿಕೆಯಲ್ಲಿ ತೊಡಗಿದಾಗ ಸಿಂಧನೂರು ಜೆ.ಡಿ.ಎಸ್ ಮುಖಂಡರಾದ ಬಸವರಾಜ ನಾಡಗೌಡ ಆಗಮಿಸಿ ಕಾರ್ಯಚಟುವಟಿಕೆಗಳನ್ನು ವೀಕ್ಷಣೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿ ವನಸಿರಿ ಫೌಂಡೇಶನ್ ಅಮರೇಗೌಡ ಮಲ್ಲಾಪೂರ ಅವರ ನೇತ್ರತ್ವದಲ್ಲಿ ಪರಿಸರದ ಬಗ್ಗೆ ಜಾಗೃತಿ ಕಾರ್ಯದಲ್ಲಿ ತೊಡಗಿರುವುದು ತುಂಬಾ ಹೆಮ್ಮೆಯ ಸಂಗತಿ ಈ ನಾಮಕರಣ ಕಾರ್ಯಕ್ರಮಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಆಗಮಿಸುತ್ತಿರುವುದು ವಿಶೇಷ ಸಂಗತಿ.ಈ ಒಂದು ತಂಡ ಇನ್ನಷ್ಟು ಜನರಲ್ಲಿ ಪರಿಸರ ಕಾಳಜಿ ಮೂಡಿಸುವಲ್ಲಿ ಯಶಸ್ವಿಯಾಗಲಿ ಮತ್ತು ಈ ಕಾರ್ಯಕ್ರಮದಲ್ಲಿ ನಾನು ಕೂಡ ಭಾಗವಹಿಸುತ್ತೇನೆ ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಲು ನಾನು ಕೂಡಾ ಸಹಕರಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಅಮರೇಗೌಡ ಮಲ್ಲಾಪೂರ,ರಾಜ್ಯ ಕಾರ್ಯದರ್ಶಿ ಶರಣೇಗೌಡ ಹೆಡಗಿನಾಳ,ತಾಲ್ಲೂಕು ಅಧ್ಯಕ್ಷರಾದ ರಮೇಶ ಕುನ್ನಟಗಿ,ಮಸ್ಕಿ ತಾಲೂಕ ಅದ್ಯಕ್ಷರಾದ ರಾಜು ಬಳಗಾನೂರ,ಸದಸ್ಯರಾದ ಮುದಿಯಪ್ಪ ಹೊಸಳ್ಳಿ ಕ್ಯಾಂಪ್,ಗಿರಿ ಹೆಡಗಿನಾಳ,ಅನಿಫ್,ಸೈಯದ್ ಮಹ್ಮದ್ ಖಾದ್ರಿ, ಧಣಿಗಳು ಗೋಮರ್ಶಿ,ಹುಸೇನ್ ಭಾಷಾ, ಸದ್ದಾಂ ಸಮಾಜ ಸೇವಕರು ಇನ್ನಿತರರು ಉಪಸ್ಥಿತರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.