ಬೆಂಗಳೂರು:ಮರಾಠಾವಾಡದಿಂದ ಕೊಮೊರಿನ್ ಪ್ರದೇಶದವರೆಗೆ ವಾಯುಭಾರ ಕುಸಿತ ಉಂಟಾಗಿದೆ. ಇದು ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ (Karnataka Weather Forecast) ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಕೆಲವು ಸ್ಥಳಗಳಲ್ಲಿ ಗಾಳಿ ವೇಗವು 40-50 ಕಿ.ಮೀನಲ್ಲಿ ಇರಲಿದ್ದು,ಇದರೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಮುಖ್ಯವಾಗಿ ಹಾವೇರಿ,ಧಾರವಾಡ,ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ,ಕೊಡಗು, ರಾಮನಗರ,ಮಂಡ್ಯ,ದಾವಣಗೆರೆಯಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ.
ಇನ್ನು ದಕ್ಷಿಣ ಕನ್ನಡ,ಉಡುಪಿ,ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಜತೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬಾಗಲಕೋಟೆ,ಗದಗ,ಕೊಪ್ಪಳ,ಮೈಸೂರು, ಬೆಂಗಳೂರು ಗ್ರಾಮಾಂತರ,ಬೆಂಗಳೂರು ನಗರದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ.ಬೀದರ್,ಕಲಬುರಗಿ,ರಾಯಚೂರು,ವಿಜಯಪುರ,ಯಾದಗಿರಿ,ಬಳ್ಳಾರಿ,ಚಾಮರಾಜನಗರ, ಚಿಕ್ಕಬಳ್ಳಾಪುರ,ಚಿತ್ರದುರ್ಗ,ಕೋಲಾರ,
ತುಮಕೂರು,ವಿಜಯನಗರದಲ್ಲೂ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವರದಿ:ಚಂದ್ರಶಾಗೌಡ ಮಾಲಿ ಪಾಟೀಲ್