ಕಲಬುರಗಿ:ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅಂಬಿಗರ ಯುವತಿಯ ಹತ್ಯೆಗೈದ ಯುವಕನನ್ನು ತಕ್ಷಣವೇ ಬಂಧಿಸಿ ಆರೋಪಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಹಡಪದ ಅಪ್ಪಣ್ಣ ಸಮಾಜದ ಸಮಾಜದ ಕಾರ್ಯಕರ್ತರು ಮತ್ತು ಕಲಬುರಗಿ ಜಿಲ್ಲೆಯ ಸಂಘಟನಾ ಕಾರ್ಯದರ್ಶಿಗಳು ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ಸಂಭವಿಸಿದ್ದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು,ಕಾಂಗ್ರೆಸ್ ಸರಕಾರ ಕಾನೂನು ಪ್ರಕಾರ ಇಂತಹ ಆರೋಪಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತರಲೇಬೇಕು?ಕಾಂಗ್ರೆಸ್ ಸರಕಾರದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತ ಪರಿಸ್ಥಿತಿ ಉದ್ಭವ ಆಗಿದೆ.?ಅಂಜಲಿ ಅಂಬಿಗರ ಯುವತಿಯನ್ನು ಪಕ್ಕದ ಏರಿಯಾದ ನಿವಾಸಿ ಗಿರೀಶ ಎಂಬಾತ ಪ್ರೀತಿಸುವಂತೆ ದುಂಬಾಲು ಬಿದ್ದಿದ್ದ ಪ್ರೀತಿ ನಿರಾಕರಿಸಿದ್ದಕ್ಕಾಗಿ ಬುಧುವಾರದಂದು ಬೆಳಿಗ್ಗೆ ಯುವತಿಯ ಮನೆಗೆ ಹೋಗಿ ಆಕೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಅಮಾನವೀಯ.ಇಂತಹ ಘಟನೆಗಳು ಹೆಚ್ಚು ಹೆಚ್ಚು ಆಗುತ್ತಿರುವ ಹಿನ್ನಲೆಯಲ್ಲಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸ್ಥಾಪಿಸಲು ರಾಜ್ಯ ಕಾಂಗ್ರೆಸ್ ಸರಕಾರ ಮುಂದಾಗಬೇಕು ಮತ್ತು ಯುವತಿಯ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.