ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಎಸ್.ಕೆ.ಬೆಳ್ಳುಬ್ಬಿ ಅವರಿಗೆ ವಿಧಾನ ಪರಿಷತ್ ಟಿಕೆಟ್ ನೀಡಬೇಕೆಂದು ಒತ್ತಾಯ

ವಿಜಯಪುರ:ಬಿಜೆಪಿ ವರಿಷ್ಠರಿಗೆ ಬಸವನ ಬಾಗೇವಾಡಿ ಮಂಡಲ ಅಧ್ಯಕ್ಷರಾದ ಸಿದ್ರಾಮ ಕಾಖಂಡಕಿ ಅವರು ಎಸ್.ಕೆ.ಬೆಳ್ಳುಬ್ಬಿ ಅವರಿಗೆ ವಿಧಾನ ಪರಿಷತ್ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಹಿಂದುಳಿದ ಸಮುದಾಯದ ಪ್ರಭಾವಿ ನಾಯಕರಾಗಿರುವ ಹಿರಿಯ ಮಾಜಿ ಸಚಿವರಾದ ಎಸ್.ಕೆ.ಬೆಳ್ಳುಬ್ಬಿಯವರು ಸಂತ್ರಸ್ತರು,ರೈತಪರ ಹೋರಾಟಗಳ ಮೂಲಕವೆ ಮಂಡಲ ಪಂಚಾಯತಿಯಿಂದ ಸಚಿವ ಸ್ಥಾನದವರೆಗೂ ಪರಿಶ್ರಮದಿಂದ ಬೆಳೆದು ಬಂದು ಇಂದು ಬಿಜೆಪಿಗೆ ಶಕ್ತಿಯಾಗಿ ನಿಂತಿದ್ದಾರೆ.ಎರಡು ಬಾರಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಜಿಲ್ಲೆಯಲ್ಲಿ ಸಮರ್ಥವಾಗಿ ಪಕ್ಷ ಸಂಘಟನೆ ಮಾಡಿ ಹೆಚ್ಚಿನ ಶಾಸಕ ಸ್ಥಾನಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ಅವರು ಸಚಿವರಾಗಿದ್ದ ವೇಳೆ ಅವಳಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ನೈಜ್ಯ ಅಭಿವೃದ್ಧಿ ಹರಿಕಾರರಾಗಿದ್ದಾರೆ.ಕಳೆದ ಲೋಕಸಭೆ ಚುನಾವಣೆ ಸೇರಿ ಎಲ್ಲಾ ಚುನಾವಣೆಗಳಲ್ಲಿ ರಾಜ್ಯಾದಂತ ಪ್ರವಾಸ ಮಾಡಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕೈಗೊಳ್ಳುವ ಮೂಲಕ ಶಕ್ತಿ ತುಂಬಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ,ಮಾಜಿ ಸಿಎಂ ಯಡಿಯೂರಪ್ಪ,ರಾಷ್ಟ್ರೀಯ ನಾಯಕರಾದ ಜೆ.ಪಿ. ನಡ್ಡಾ,ಪ್ರಧಾನಿ ನರೇಂದ್ರ ಮೋದಿ,ಅಮೀತ ಶಾ ಎಲ್ಲರೂ ಸೇರಿ ಈ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಎಸ್.ಕೆ.ಬೆಳ್ಳುಬ್ಬಿಯವರಿಗೆ ಟಿಕೆಟ್ ನೀಡಬೇಕೆಂದು ಬಿಜೆಪಿ ಬಸವನ ಬಾಗೇವಾಡಿ ಮಂಡಲದ ವತಿಯಿಂದ ಒತ್ತಾಯಿಸಿದ್ದಾರೆ.ಈ ಸಂದರ್ಭದಲ್ಲಿ ರಾಹುಲ ಕಲಗೊಂಡ,ರಾಜು ತೆಲ್ಲಗಿ,ಅಪ್ಪು ಹಸಭೆ,ಮೌಲಾಲಿ ಪಾಂಡುಗೋಳ,ಬಸು ಪರನಾಕ,ಶಂಕರ ಮಸಳಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ