ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸಾಹಿತಿ ಡಾ.ಭೇರ್ಯ ರಾಮ ಕುಮಾರ್ಅವರಿಗೆ ಕಾಯಕ ಯೋಗಿ ಬಸವಶ್ರೀ ಪ್ರಶಸ್ತಿ ಪ್ರದಾನ

ದಾವಣಗೆರೆಯ ವಿಶ್ವವೀರಶೈವ ಲಿಂಗಾಯತ ಏಕೀಕರಣ ಪರಿಷತ್ ಇಂದು ನಡೆಸಿದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ.ಭೇರ್ಯ ರಾಮ ಕುಮಾರ್,ಹಿರಿಯ ಸಾಹಿತಿಗಳಾದ ಎನ್.ವಿ.ರಮೇಶ್,ಹಿರಿಯ ಸಾಹಿತಿ ಎಸ್.ಎನ್.ಸಂಗನಾಳ್ ಮಠ್ ಅವರೂ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಕಾಯಕ ಯೋಗಿ ಬಸವಶ್ರೀ ಪ್ರಶಸ್ತಿ ನೀಡಿ ಅವರುಗಳ ಸೇವೆಯನ್ನು ಗೌರವಿಸಲಾಯಿತು.
ಕಮ್ಮತ್ತ ಹಳ್ಳಿ ವಿರಕ್ತ ಮಠದ ಶ್ರೀ ಡಾ.ಗುರು ಬಸವ ಸ್ವಾಮೀಜಿಯವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ಅರಳಿ ನಾಗರಾಜ್ ಅವರು ಜ್ಯೋತಿ ಬೆಳಗಿಸಿ,ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಹಿರಿಯ ಸಾಹಿತಿ ಹಾಗೂ ನ್ಯಾಯವಾದಿಗಳಾದ ಡಾ.ರೇವಣ್ಣ ಬಳ್ಳಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಶ್ರೀಮತಿ ಜಿ.ಕೆ.ಶಾಕುಂತಲ ಹಾಗೂ ಶ್ರೀಮತಿ ಕುಸುಮ ಲೋಕೇಶ್ ಬಸವಣ್ಣ ಅವರ ಜೀವನ ಹಾಗೂ ವಚನಗಳನ್ನು ಕುರಿತು ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ ನ್ಯಾಯಮೂರ್ತಿ ಅರಳಿ ನಾಗರಾಜ್ ಅವರಿಗೆ ಜಗಜ್ಯೋತಿ ಬಸವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.2024 ರ ಸಾಲಿನಲ್ಲಿ ಶೇಕಡಾ 90 ಕೂ ಹೆಚ್ಚು ಅಂಕ ಗಳಿಸಿದ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ