ಕಲಬುರಗಿ:ಪೊಲೀಸರೆಂದರೆ ಭಯ ಬೀಳುವ ಈ ಕಾಲದಲ್ಲಿ ಪೊಲೀಸರ ಅಕ್ರಮಗಳ ವಿರುದ್ಧ ಧ್ವನಿ ಎತ್ತಿ ಅವರ ಅಕ್ರಮಗಳನ್ನು ಬಯಲಿಗೆಳೆದು ಮೇಲಾಧಿಕಾರಿಳಿಗೆ ದೂರು ನೀಡಿ ಅವರ ವಿರುದ್ಧ ಕಾನೂನು ಕ್ರಮಕ್ಕಾಗಿ ಹೋರಾಟ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತ ಶರಣಪ್ಪ ರೆಡ್ಡಿ ಲಖಣಾಪೂರ ಇವರನ್ನು ಕಲಬುರಗಿ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಜೇವರ್ಗಿ ಪೊಲೀಸ್ ಠಾಣೆಯ ಪಿಎಸ್ಐ ಪ್ರಸ್ತಾವನೆ ಸಲ್ಲಿಸಿದ್ದರು.ಈ ಪ್ರಸ್ತಾವನೆಯ ಮೇಲಿನ ವಿಚಾರಣೆ ಸಂದರ್ಭದಲ್ಲಿ ಸಹಾಯಕ ಆಯುಕ್ತರು,ಆರೋಪಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕೊಡದೆ,ನಿರ್ಲಕ್ಷಿಸಿ ಚಿತ್ರದುರ್ಗ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಅಲ್ಲದೇ ಈ ಆದೇಶದ ಪ್ರತಿ ಕೊಡಲು ಸತಾಯಿಸಿ ಬರೋಬ್ಬರಿ 46 ದಿನಗಳ ಬಳಿಕ ಆರೋಪಿಗೆ ಆದೇಶದ ಪ್ರತಿ ಕೊಟ್ಟಿದ್ದಾರೆ.ಈ ಅನ್ಯಾಯದ ವಿರುದ್ಧ ಶರಣಪ್ಪ ರೆಡ್ಡಿ ಲಖಣಾಪೂರ ಇವರು ಹೈಕೋರ್ಟ್ ಮೆಟ್ಟಿಲೇರಿದ್ದರು.ಇವರ ಅರ್ಜಿಯನ್ನು ಮಾನ್ಯ ಮಾಡಿದ ಕಲಬುರಗಿ ಹೈಕೋರ್ಟ್ ಪೀಠವು, ಸರ್ಕಾರಕ್ಕೆ ಛೀಮಾರಿ ಹಾಕಿ,ಶರಣಪ್ಪ ರೆಡ್ಡಿ ವಿರುದ್ಧದ ಗಡಿಪಾರು ಆದೇಶಕ್ಕೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಸುಳ್ಳು ಗಡಿಪಾರು ಪ್ರಸ್ತಾವನೆ ಸಲ್ಲಿಸಿದ ಹಾಗೂ ರಾಜಕೀಯ ಪ್ರಭಾವಕ್ಕೊಳಗಾಗಿ ಆದೇಶ ಹೊರಡಿಸಿದ ಸಹಾಯಕ ಆಯುಕ್ತರ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ಸಾಮಾಜಿಕ ಕಾರ್ಯಕರ್ತ ಶರಣಪ್ಪ ರೆಡ್ಡಿ ಲಖಣಾಪೂರ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.