ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಡಿ.5 ರಿಂದ ಮೆದುಳು ಜ್ವರ ಖಾಯಿಲೆ ತಡೆಗಟ್ಟಲು (ಜೆಇ) ಲಸಿಕಾ ಅಭಿಯಾನ
“ಜಿಲ್ಲೆಯ 1 ರಿಂದ 15 ವಯೋಮಾನದ ಪ್ರತಿ ಮಗುವಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಿ”
-ಸಿಇಓ ಅಮರೇಶ ನಾಯ್ಕ್


ಯಾದಗಿರಿ : ಮೆದುಳು ಜ್ವರ ಖಾಯಿಲೆ ತಡೆಗಟ್ಟಲು ಇದೇ ಡಿಸೆಂಬರ್ 5 ರಿಂದ 25ರ ವರೆಗೆ ನಡೆಯುವ ಅಭಿಯಾನದಲ್ಲಿ ಜಿಲ್ಲೆಯಾದ್ಯಂತ 1 ರಿಂದ 15 ವಯೋಮಾನದ ಮಕ್ಕಳಿಗೆ ತಪ್ಪದೇ ಜೆಇ ಲಸಿಕೆಯನ್ನು ಹಾಕಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಅಮರೇಶ ನಾಯ್ಕ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಿನ್ನೆ ಹಮ್ಮಿಕೊಳ್ಳಲಾಗಿದ್ದ (ಜೆಇ), (ಮೆದುಳು ಜ್ವರ) ಲಸಿಕಾ ಅಭಿಯಾನ ಹಮ್ಮಿಕೊಳ್ಳುವ ಕುರಿತ ಜಿಲ್ಲಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮೆದುಳು ಜ್ವರ ಖಾಯಿಲೆಗೆ ಜಪಾನೀಸ್ ಎನ್‌ಸೆಫಲೈಟಿಸ್ (ಜೆಇ) ಒಂದು ಮುಖ್ಯ ಕಾರಣವಾಗಿದ್ದು ವೈರಾಣುವಿನಿಂದ ಉಂಟಾಗುತ್ತದೆ ಕ್ಯೂಲೆಕ್ಸ್ ಸೊಳ್ಳೆಗಳ ಮೂಲಕ ಈ ಖಾಯಿಲೆ ಹರಡುತ್ತದೆ ಇದಕ್ಕೆ (ಜೆಇ) ಲಸಿಕೆ ಚುಚ್ಚುಮದ್ದು ಪರಿಣಾಮಕಾರಿ ಅಸ್ತ್ರವಾಗಿರುವದರಿಂದ ಈ ವಯೋಮಾನದ ಮಕ್ಕಳಿಗೆ ಶೇ.100 ರಷ್ಟು ಲಸಿಕೆ ಹಾಕಿಸುವಂತೆ ಅವರು ಸೂಚನೆ ನೀಡಿದರು.ಈ ಅಭಿಯಾನದ ಅಂಗವಾಗಿ ಜಿಲ್ಲೆಯ ಎಲ್ಲಾ ಶಾಲೆ,ಅಂಗನವಾಡಿ ಕೇಂದ್ರಗಳ,ವಸತಿ ಶಾಲೆ,ವಸತಿ ನಿಲಯ ಮಕ್ಕಳಿಗೆ ತಪ್ಪದೇ ಲಸಿಕಾ ಹಾಕಿಸಬೇಕು.ಪಾಲಕರು,ಶಿಕ್ಷಕರು, ಎಸ್.ಡಿ.ಎಮ್.ಸಿಗಳೊಂದಿಗೆ ಸಭೆ ನಡೆಸಿ ಲಸಿಕೆ ಮಹತ್ವದ ಕುರಿತು ತಿಳಿಹೇಳಬೇಕು.ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಹೆಚ್ಚಿನ ಗಮನ ನೀಡಬೇಕು.ಆರೋಗ್ಯ ಇಲಾಖೆ,ವಿವಿಧ ಇಲಾಖೆಗಳ ಅಧಿಕಾರಿಗಳು,ಆಶಾ,ಅಂಗನವಾಡಿ,ಆರೋಗ್ಯ ಕಾರ್ಯಕರ್ತೆಯರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಅಭಿಯಾನ ಯಶಸ್ವಿಗೊಳಿಸಬೇಕು.ಗ್ರಾಮ ಪಂಚಾಯತವಾರು ಸೂಕ್ತ ಅರಿವು ಮೂಡಿಸಲು ಹಾಗೂ 1 ರಿಂದ 6 ವರ್ಷದ ಹಾಗೂ 6 ರಿಂದ 15 ವಯೋಮಾನದ ಮಕ್ಕಳಿಗೆ ತಪ್ಪದೇ ಈ ಲಸಿಕೆ ಹಾಕಿಸಲು ಅವರು ಸೂಚಿಸಿದರು.5ನೇ ಡಿಸೆಂಬರ್ 2022 ರಿಂದ ಚಾಲನೆಗೊಳ್ಳುವ ಈ ಅಭಿಯಾನದ ಅಂಗವಾಗಿ ಮೊದಲನೇ ವಾರದಲ್ಲಿ ಎಲ್ಲಾ ಶಾಲೆಗಳಲ್ಲಿ ಲಸಿಕಾ ಕೇಂದ್ರಗಳನ್ನು ಆಯೋಜಿಸಿ ಲಸಿಕಾಕರಣ ನಡೆಸಬೇಕು ನಂತರದ ಎರಡು ವಾರಗಳಲ್ಲಿ ಎಲ್ಲಾ ಆರೋಗ್ಯ ಸಂಸ್ಥೆಗಳು ಅಂಗನವಾಡಿ ಕೇಂದ್ರಗಳು ಹಾಗೂ ಇನ್ನಿತರ ಪ್ರದೇಶಗಳಲ್ಲಿ ಲಸಿಕಾಕರಣ ನಡೆಸಬೇಕು ಈ ಅಭಿಯಾನ ಆಯೋಜನೆಯನ್ನು, ಅತ್ಯಂತ ಕಟ್ಟೆಚ್ಚರದಿಂದ ಹಮ್ಮಿಕೊಳ್ಳಬೇಕು.
ಜೆಇ ಖಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯು ಜ್ವರ ಪೀಡಿತನಾಗಿದ್ದು ಮಾನಸಿಕ ಸ್ಥಿತಿಯಲ್ಲಿ ಬದಲಾವಣಿಹೊಂದಿದ್ದು ಅಪಸ್ಮಾರವು ಉಂಟಾಗಬಹುದು ಜಪಾನೀಸ್ ಎನ್‌ಸೆಫಲೈಟಿಸ್ (ಜೆಇ) ಮಾರಕ ಖಾಯಿಲೆಯನ್ನು ತಡೆಗಟ್ಟಲು ಜೆಇ ಲಸಿಕೆ ಅತ್ಯಂತ ಪರಿಣಾಮಕಾರಿ ಅಸ್ತ್ರವಾಗಿದೆ. ಕಾರಣ ಅಧಿಕಾರಿಗಳು ಜಾಗೃತಿಯಿಂದ ಕಾರ್ಯನಿರ್ವಸಬೇಕು ಎಂದು ಹೇಳಿದರು. ಈಗಾಗಲೇ ರಾಜ್ಯದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಧಾರವಾಡ, ಚಿತ್ರದುರ್ಗ ಮತ್ತು ದಾವಣಗೆರೆ ಈ 10 ಎಂಡೆಮಿಕ್ ಜಿಲ್ಲೆಗಳಲ್ಲಿ ಜೆಇ ಲಸಿಕೆಯನ್ನು ಮಕ್ಕಳಿಗೆ 9 ತಿಂಗಳು ತುಂಬಿದ ನಂತರ ಮೊದಲನೆ ಡೋಸ್ ಮತ್ತು 1.5 ವರ್ಷದ ವಯಸ್ಸಿನಲ್ಲಿ 2ನೇ ಡೋಸ್ (ಜೆಇ) ಲಸಿಕೆ ಚುಚ್ಚುಮದ್ದು ನೀಡಲಾಗುತ್ತಿದೆ.ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ಹಾಗೂ ಸರ್ಕಾರದ ನಿರ್ದೇಶನದಂತೆ ಹೆಚ್ಚುವರಿಯಾಗಿ ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರ್ಗಿ, ತುಮಕೂರು, ರಾಮನಗರ, ಉಡುಪಿ, ಯಾದಗಿರಿ ಜಿಲ್ಲೆಗಳಲ್ಲಿ ಜೆಇ ನಾನ್ ಟ್ರಾನ್ಸ್ಮಿಷನ್ ಸಮಯದಲ್ಲಿ ಜೆಇ ಲಸಿಕಾ ಅಭಿಯಾನ ಹಮ್ಮಿಕೊಳ್ಳಲು ನಿರ್ದೇಶಿಸಿದ್ದು, ಈ ಅಭಿಯಾನದಲ್ಲಿ 1 ರಿಂದ 15 ವರ್ಷದ ಮಕ್ಕಳಿಗೆ ಒಂದು ಡೋಸ್ ಜೆಇ ಲಸಿಕೆ ಚುಚ್ಚುಮದ್ದು ನೀಡಲಾಗುವುದು ಎಂದು ಹೇಳಿದರು.
ಕಲಬುರ್ಗಿ ಡಬ್ಲೂö್ಯ.ಹೆಚ್.ಓ (ಎಸ್.ಎಮ್.ಓ) ಡಾ. ಅನೀಲ ತಾಳಿಕೋಟಿ ಮಾತನಾಡಿ ಜಿಲ್ಲೆಯಲ್ಲಿ ಈ ಅಭಿಯಾನ ಅಂಗವಾಗಿ ಒಟ್ಟು 3,73,963 ಮಕ್ಕಳಿಗೆ ಈ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, 1 ರಿಂದ 6 ವಯೋಮಾನದ 1.10 ಲಕ್ಷ ಹಾಗೂ 6 ರಿಂದ 15 ವಯೋಮಾನದ 2.54 ಲಕ್ಷ ಮಕ್ಕಳು ಹಾಗೂ ಶಾಲೆಯಿಂದ ಹೊರಗುಳಿದ 8335 ಮಕ್ಕಳಿಗೆ ಲಸಿಕೆ ನೀಡುವ ಉದ್ದೇಶ ಹೊಂದಿದ್ದು, 1590 ಶಾಲೆ ಸ್ಥಳಗಳಲ್ಲಿ ಹಾಗೂ ಇತರೆ ಆರೋಗ್ಯ ಸಂಸ್ಥೆಗಳು ಅಂಗನವಾಡಿ ಕೇಂದ್ರಗಳು ಮತ್ತು ಇನ್ನಿತರ ಪ್ರದೇಶಗಳಲ್ಲಿ ಲಸಿಕಾ ಕಾರಣ ನೀಡಲಾಗುತ್ತಿದೆ. ಅದಕ್ಕಾಗಿ ಸರ್ಕಾರದ ವಿವಿಧ ಇಲಾಖೆಗಳು, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ನಗರಾಭಿವೃದ್ಧಿ, ಕಾರ್ಮಿಕ ಇಲಾಖೆ, ವೈದ್ಯಕೀಯ ಶಿಕ್ಷಣ, ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾಧ್ಯಮಗಳ ಸಹಕಾರವನ್ನು ಕೋರಿದರು.
ಪ್ರಪಂಚದಾದ್ಯಂತ 24 ರಾಷ್ಟçಗಳಲ್ಲಿ ಜಪಾನೀಸ್ ಎನ್‌ಸೆಫಲೈಟಿಸ್ (ಜೆಇ) ಎಂಡೆಮಿಕ್ ಎಂದು ಗುರುತಿಸಲ್ಪಟ್ಟಿದೆ. ಇವುಗಳಲ್ಲಿ ಭಾರತ ಸೇರಿದಂತೆ 11 ಎಷ್ಯಾ ರಾಷ್ಟ್ರಗಳು ಸೇರಿದ್ದು ಪ್ರತಿ ವರ್ಷ 68000 ಪ್ರಕರಣಗಳು ವರದಿಯಾಗುತ್ತಿವೆ. ಇವುಗಳಲ್ಲಿ ಮರಣ ಪ್ರಮಾಣ ಶೇ.20 ರಿಂದ ಶೇ.30 ರಷ್ಟಿದ್ದು ಗುಣಹೊಂದಿದವರಲ್ಲಿ ಶೇ. 30 ರಿಂದ ಶೇ.50 ರಷ್ಟು ಪ್ರಕರಣಗಳಲ್ಲಿ ನರದೌರ್ಬಲ್ಯ, ಬುದ್ದಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಮಲ್ಲಪ್ಪ, ಸೇರಿದಂತೆ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ