ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಲಾ ಪ್ರಾರಂಭೋತ್ಸವ ಮತ್ತು ದಾಖಲಾತಿ ಆಂದೋಲನ

ಬಾಗಲಕೋಟೆ:ಹುನಗುಂದ ತಾಲೂಕಿನ ಹಿರೇಮಾಗಿ ಸರಕಾರಿ ಕನ್ನಡ ಮಾದರಿಯ ಪ್ರಾಥಮಿಕ ‌ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ದಾಖಲಾತಿ ಆಂದೋಲನ ಕಾರ್ಯಕ್ರಮವು ಅದ್ದೂರಿಯಾಗಿ, ಸಡಗರ ಸಂಭ್ರಮದಿಂದ ದಿನಾಂಕ 31.05.2024ರಂದು ಗುರುವಾರ ಜರುಗಿತು.
ಶಾಲಾ ಮಕ್ಕಳಿಗೆ ಹೂ ನೀಡಿ,ಚಾಕಲೇಟ್ ವಿತರಿಸಿ ಸ್ವಾಗತ ಮಾಡಿಕೊಳ್ಳಲಾಯಿತು.ಮಕ್ಕಳಿಗೆ ಬಲೂನನ್ನ ನೀಡಿ ಚಟುವಟಿಕೆಯ ಮೂಲಕ ಮಕ್ಕಳನ್ನು ಸ್ವಾಗತಿಸಿ, ಕಲಿಕೆಗೆ ಪ್ರೇರಣೆ ನೀಡಲಾಯಿತು. ಶಾಲಾ ಪ್ರಾರಂಭೋತ್ಸವ ಮತ್ತು ದಾಖಲಾತಿ ಆಂದೋಲನ ವ್ಯಾಪಕ ಪ್ರಚಾರ ಕುರಿತು ಕರಪತ್ರಗಳನ್ನು ವಿತರಿಸಲಾಯಿತು ಈ ಸಂದರ್ಭದಲ್ಲಿ SDMC ಅಧ್ಯಕ್ಷರು ಮಕ್ಕಳಿಗೆ ಪುಷ್ಪ ನೀಡಿ ಸ್ವಾಗತಿಸಿ, ಮಾತನಾಡಿ ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ದಾಖಲಿಸಿ, ಮಕ್ಕಳ ಸರ್ವಾಂಗೀಣ ಅಭಿವೃದ್ದಿಗೆ ಕೈ ಜೋಡಿಸಿ ಎಂದು ಮನವಿ ಮಾಡಿದರು..
ಪ್ರಧಾನ ಗುರುಗಳಾದ ಗುರುರಾಜ ರಜಪೂತ ಮಾತನಾಡಿ,ಸರ್ಕಾರದ ಉಚಿತ ಸೌಲಭ್ಯಗಳನ್ನು, ಉಚಿತ ಶಿಕ್ಷಣವನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ಸಮುದಾಯದ ಪಾತ್ರ ಬಹಳ ಪ್ರಮುಖವಾಗಿದೆ ಎಂದು ತಿಳಿಸಿದರು.ಈ ಕಾರ್ಯಕ್ರಮದಲ್ಲಿ SDMC ಸದಸ್ಯರು, ಗ್ರಾ ಪಂ ಸದಸ್ಯರು,ಊರಿನ ಹಿರಿಯರು,ಶಾಲಾ ಶಿಕ್ಷಕರ ಬಳಗ, ಅಡುಗೆ ಸಿಬ್ಬಂದಿ ಹಾಗೂ ಶಾಲಾ ವಿದ್ಯಾರ್ಥಿಗಳು ಹಾಜರಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ