ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಬಾಗೇವಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಬ್ರಾಂಪುರ್ ಗ್ರಾಮದಿಂದ ಕರ್ಚಿಗನೂರ್ ಹೋಗುವ ರಸ್ತೆ ಮಾರ್ಗವಾಗಿ ಅಕ್ರಮವಾಗಿ ದಂಧೆ ನಡೆಯುತ್ತಿದ್ದರೂ ಸಂಬಂಧ ಪಟ್ಟ ಪೊಲೀಸ್ ಇಲಾಖೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಕಂದಾಯ ಇಲಾಖೆ ಅಧಿಕಾರಿಗಳು ಮಾನವಾಗಿ ಕುಳಿತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ
ದಿನನಿತ್ಯ ಐದಕ್ಕೂ ಹೆಚ್ಚು ಟಿಪ್ಪರ್ ಗಳು ರಾತ್ರಿ ಹಗಲು ಸಾಗಾಟ ನಡೆಸುತ್ತಿದ್ದರೂ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿರುವುದು ಏಕೆ ಎಂದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಸಂಬಂಧಪಟ್ಟ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳ ಗಮನಕ್ಕೆ ದೂರವಾಣಿ ಸಂಪರ್ಕ ಮೂಲಕ ತಿಳಿಸಿದರೂ ಮಾವನವಹಿಸಿರುವುದೇಕೆ !
ಅಧಿಕಾರಿಗಳ ಗಮನಕ್ಕೆ ಇದ್ದರೂ ಕ್ರಮಕ್ಕೆ ಮುಂದಾಗುತ್ತಿಲ್ಲ ಏಕೆ?
ಕೆರೆಯನ್ನೇ ನುಂಗಿ ಹಾಕುತ್ತಿರುವ ದಂಧೆಕೋರರು
ಯಾವುದೇ ಪರವಾನಿಗೆ ಇಲ್ಲದೆ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪ
ಏನಾದರೂ ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ನಿಲ್ಲಿಸಿ ಸೂಕ್ತ ಕ್ರಮ ಜರುಗಿಸಬೇಕೆಂದು ಗ್ರಾಮಸ್ಥರ ಒತ್ತಾಯವಾಗಿದೆ.