ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಶ್ವ ಪರಿಸರ ದಿನಾಚರಣೆ

ಶಿವಮೊಗ್ಗ:ಭಾರತ ಸರ್ಕಾರ,ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ,ನೆಹರು ಯುವ ಕೇಂದ್ರ, ಶಿವಮೊಗ್ಗ ಮತ್ತು ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ,ಗೋಪಾಳ,ಮುಖಾ ಮುಖಿ ರಂಗತಂಡದ ಸಹಯೋಗದೊಂದಿಗೆ ದಿನಾಂಕ 05.06.2024 ರಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಉದ್ದೇಶಿಸಿ ಮಕ್ಕಳಿಗೆ ಪರಿಸರದ ಬಗ್ಗೆ ಗಿಡಗಳನ್ನು ಏಕೆ ನೆಡಬೇಕು ಅದರಿಂದಾಗುವ ಪ್ರಯೋಜನಗಳು,ಗಿಡ,ಮರಗಳು ನಮಗೆ ನೀಡಿರುವ ಕೊಡುಗೆಗಳು ಹಾಗೂ ಪರಿಸರವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದರ ಬಗ್ಗೆ ಸವಿವರವಾಗಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳಾದ ಶ್ರೀ.ಉಲ್ಲಾಸ್‌ ಕೆ.ಟಿ.ಕೆ ರವರು ತಿಳಿಸಿದರು.ಮಕ್ಕಳು ಪರಿಸರದ ಬಗ್ಗೆ ತಮಗೆ ತಿಳಿದ ವಿಚಾರಗಳನ್ನು ಮಾತನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾನಿಕೇತನ ಶಾಲೆಯ ಮುಖ್ಯೋಪಾಧ್ಯಾಯರು,ಮುಖಾಮುಖಿ ರಂಗತಂಡದ ಮಹೇಂದ್ರ,ರಂಗಾಯಣ ಮಂಜು, ಶಿಕ್ಷಕ ವೃಂದದವರು, ಆಡಳಿತ ಮಂಡಳಿಯವರು,ಶಾಲಾಮಕ್ಕಳು ಉಪಸ್ಥಿತರಿದ್ದರು ಹಾಗೂ ಎಲ್ಲರೂ ಜೊತೆಗೂಡಿ ಶಾಲೆಯ ಸುತ್ತಮುತ್ತ ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ