ಬಿರುಗಾಳಿ ಸಹಿತ ಮಳೆಯಿಂದಾಗಿ ಬಿದ್ದಿರುವ ಮರ, ರೆಂಬೆ-ಕೊಂಬೆಗಳ ತೆರವಿಗೆ ಸಂಬಂಧಿಸಿದಂತೆ 1533 ಸಂಖ್ಯೆಗೆ ಬಂದ ದೂರುಗಳನ್ನಾಧರಿಸಿ ಕ್ರಮ ಕೈಗೊಳ್ಳಲಾಗುತ್ತಿದೆ.
ದಕ್ಷಿಣ ವಲಯದಲ್ಲಿ ಬಿದ್ದಿರುವ ಮರಗಳ ತೆರವಿಗೆ 20 ತಂಡಗಳನ್ನು ನಿಯೋಜಿಸಲಾಗಿದೆ.
ಸಾರ್ವಜನಿಕರು 1533 ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಿದ ತಕ್ಷಣವೇ ತಂಡಗಳನ್ನು ರವಾನಿಸಿ ತೆರವು ಕಾರ್ಯ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ವರದಿ: ಕೊಡಕ್ಕಲ್ ಶಿವಪ್ರಸಾದ್



















