ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಸಕ ಶಿವರಾಮ್ ಹೆಬ್ಬಾರ್ ರಿಂದ ಪಾಳಾದಲ್ಲಿ ನೂತನ ಕೆಡಿಸಿಸಿ ಬ್ಯಾಂಕ್ ಶಾಖೆ ಉದ್ಘಾಟನೆ

ಮುಂಡಗೋಡ:ಶಾಸಕರು ಹಾಗೂ ಕೆ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಶಿವರಾಮ ಹೆಬ್ಬಾರ್ ಅವರು ರವಿವಾರ ತಾಲೂಕಿನ ಪಾಳಾ ಗ್ರಾಮದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ನ ನೂತನ ಶಾಖೆಯನ್ನು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಕೆ.ಡಿ.ಸಿ.ಸಿ ಬ್ಯಾಂಕ್ ನ ಶತಮಾನೋತ್ಸವ ಸವಿನೆನಪಿಗಾಗಿ ಜಿಲ್ಲೆಯಾದ್ಯಂತ 54 ಶಾಖೆಗಳನ್ನು ಪ್ರಾರಂಭಿಸುವ ಕುರಿತು ತಿರ್ಮಾನಿಸಲಾಗಿತ್ತು ಅದರಂತೆ ಪಾಳಾ ಗ್ರಾಮದಲ್ಲಿ ನೂತನ ಶಾಖೆಗೆ ಚಾಲನೆ ನೀಡಲಾಗಿದೆ‌.ಬ್ಯಾಂಕ್ ನ ಪ್ರಗತಿಗೆ ಗ್ರಾಹಕರ ವಿಶ್ವಾಸ ಮುಖ್ಯವಾಗಿದೆ ಹಾಗೂ ಸಹಕಾರಿ ಕ್ಷೇತ್ರ ಎಲ್ಲಿ ಉತ್ತಮವಾಗಿದೆಯೋ ಅಲ್ಲಿ ರೈತರು ಜೀವಂತವಾಗಿದ್ದಾರೆ.ಎಲ್ಲಿ ಸಹಕಾರಿ ಕ್ಷೇತ್ರ ಜೀವಂತವಾಗಿಲ್ಲವೋ ಅಲ್ಲಿ ರೈತರು ಕೂಡಾ ಕಷ್ಟಕರ ಜೀವನ ನಡೆಸುತ್ತಿದ್ದಾರೆ ಸರ್ಕಾರದ ಅನುದಾನ ರೈತರಿಗೆ ಸಿಗಬೇಕಾದಲ್ಲಿ ಸಹಕಾರಿ ಕ್ಷೇತ್ರ ಗಟ್ಟಿಯಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷರಾದ ಮೋಹನದಾಸ್ ನಾಯಕ, ನಿರ್ದೇಶಕರಾದ ಪ್ರಮೋದ ದವಳೆ, ಎಲ್.ಟಿ.ಪಾಟೀಲ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜ್ಞಾನೇಶ್ವರ ಗುಡಿಯಾಳ, ಪ್ರಧಾನ ಕಾರ್ಯದರ್ಶಿ ಗೋಪಾಲ ಪಾಟೀಲ್,ಪ್ರಮುಖರಾದ ಚಂದ್ರು ಗೌಡ್ರು, ಚೇತನ್ ನಾಯ್ಕ,ಬ್ಯಾಂಕ್ ನ ಎಮ್.ಡಿ ಶ್ರೀಕಾಂತ ಭಟ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ