ಮೈಸೂರು ದಸರಾ ಮಾದರಿಯಲ್ಲಿ ಬಸವ ಜಯಂತಿಯನ್ನು ಆನೆ ಮೇಲೆ ಬಸವಣ್ಣನವರ ಮೂರ್ತಿ ಇರಿಸಿ ಮೆರವಣಿಗೆ ನಡೆಸುವ ಮೂಲಕ ಅದ್ದೂರಿಯಾಗಿ ಆಚರಿಸಿದಕ್ಕಾಗಿ ಅಭಿನಂದನೆ ವ್ಯಕ್ತವಾಗಿದೆ.
ವೀರಶೈವ ಲಿಂಗಾಯತ ಸಮಾಜದ ಸಾವಿರಾರು ಯುವಕರು ಮತ್ತು ಬಂಧುಗಳು ಬಸವ ಜಯಂತಿಯಲ್ಲಿ ಭಾಗವಹಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ.
ಅಧ್ಯಕ್ಷರಾದ ಮೊದಲು ಅವಧಿಯಲ್ಲೇ ದಸಾರ ಮಾದರಿಯಲ್ಲಿ ಮೈಸೂರಿನಲ್ಲಿ ಐತಿಹಾಸಿಕ ಕಾರ್ಯಕ್ರಮ ಯಶಸ್ವಿಯಾಗಲು ಕಾರಣರಾದ ಬಸವ ಬಳಗಗಳ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಕುಮಾರ್ ಅವರಿಗೆ ಅಭಿನಂದನೆಗಳ ಸುರಿಮಳೆ ಬಂದಿದೆ.
ಅನೇಕ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಸಭೆ, ಸಮಾರಂಭಗಳನ್ನು ಮಾಡಿ ಯುವಕರನ್ನು ಹುರಿದುಂಬಿಸಿ ಬಸವ ಜಯಂತಿ ಅತ್ಯಂತ ಯಶಸ್ವಿಯಾದುದಕ್ಕೆ ಬಸವ ಬಳಗಗಳ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಕುಮಾರ್ ಅವರಿಗೆ ಸಮುದಾಯದ ಯುವ ನಾಯಕ ತೇಜಸ್ವಿ ನಾಗಲಿಂಗ ಸ್ವಾಮಿ ಹೃದಯ ಪೂರ್ವಕವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.