ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

3ನೇ ಬಾರಿ ಪ್ರಧಾನಿಯಾಗಿ “ನಮೋ’ ಪ್ರಮಾಣ: ಮಹಾಗಾಂವ ಕ್ರಾಸ್ ನಲ್ಲಿ ಸಂಭ್ರಮಾಚರಣೆ

ಕಲಬುರಗಿ/ಕಮಲಾಪೂರ:ನರೇಂದ್ರ ಮೋದಿ ಅವರು ರವಿವಾರ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಮಹಾಗಾಂವ ಕ್ರಾಸ್ ಹಾಗೂ ನಾಗೂರನಲ್ಲಿ ಮೋದಿ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿತ್ತು.ಈ ಸಂಭ್ರಮವನ್ನು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮೋದಿ ಅವರು ಪ್ರಮಾಣ ವಚನ ಸ್ವೀಕಾರಕ್ಕೆ ಆಗಮಿಸಿದ ವೇಳೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು.ಪ್ರಮಾಣ ವಚನ ಸ್ವೀಕರಿಸುವ ವೇಳೆ ಎದ್ದು ನಿಂತು,ಚಪ್ಪಾಳೆ,ಶಿಳ್ಳೆ,ಪಟಾಕಿ, ಹರ್ಷೋದ್ಘಾರದೊಂದಿಗೆ ನಾಯಕರು, ಕಾರ್ಯಕರ್ತರು ಸಂಭ್ರಮಿಸಿದರು.ಜೈ ಜೈ ಮೋದಿ,ಜೈ ಬಿಜೆಪಿ ಘೋಷಣೆಗಳು ಮೊಳಗಿದವು.
ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ ಘೋಷಣೆ ಕೂಗುವ ಮೂಲಕ ಸಂಭ್ರಮಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ,ಪರಸ್ಪರ ಸಿಹಿ ತಿನ್ನಿಸಿದ್ದಾರೆ.NDA ಸರ್ಕಾರ ಪರ ಘೋಷಣೆ ಕೂಗಿ, ನಮೋ 3.0 ನರೇಂದ್ರ ಮೋದಿ ಭಾವಚಿತ್ರ ಹಿಡಿದು ಸಂಭ್ರಮಿಸಿದ್ದಾರೆ.ಸಂಭ್ರಮಾಚರಣೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ