ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ.ಶ್ರೀನಿವಾಸ್ ಎನ್.ಟಿ. ಅವರು ದಿ.10-06-24 ರಂದು ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಸಭೆ ನಡೆಸಿದರು.ನಮ್ಮ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆಯಲ್ಲಿ ಸಮಸ್ಯೆ ಕಂಡುಬರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಕಟ್ಟು ನಿಟ್ಟಾಗಿ ಸೂಚಿಸಿದರು.ವಸತಿ ನಿಲಯಕ್ಕಾಗಿ ಯಾರೇ ಅರ್ಜಿ ಸಲ್ಲಿಸಿದರೂ ವಿದ್ಯಾರ್ಥಿಯ ಭವಿಷ್ಯದ ದೃಷ್ಟಿಯಿಂದ ಅಡಚಣೆಯಾಗದಂತೆ ಮುಕ್ತವಾಗಿ ಅವರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದೂ ಹೇಳಿದರು.ಇದೇ ವೇಳೆ ಶ್ರೀ ದೇವರಾಜು ಅರಸು ಹಿಂದುಳಿದ ವರ್ಗಗಳ ಬಾಲಕರ ವಸತಿ ನಿಲಯಕ್ಕೆ ಶಾಸಕರು ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಶ್ರೀ ಜಗದೀಶ್ ಅವರು ಮತ್ತು ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ ಅಂಗಡಿ ಶಶಿಕುಮಾರ್