ಉತ್ತರ ಕನ್ನಡ:ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿದ ಬಳಿಕ ನವದೆಹಲಿಯಲ್ಲಿ ಪ್ರಧಾನಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹಾಗೂ ಸಂಸದರ ಸಭೆ ಬಳಿಕ ಶಿರಸಿಗೆ ತೆರಳುವ ವೇಳೆ ಮಾರ್ಗ ಮಧ್ಯೆ ಮುಂಡಗೋಡದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ ಅಧಿಕಾರಿಗಳ ಸಭೆ ನಡೆಸಿದರು.
ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೆನರಾ ಲೋಕಸಭಾ ಮತ ಕ್ಷೇತ್ರದ ಜನತೆ ಮೋದಿ ನಾಯಕತ್ವ ಮೇಲೆ ನಂಬಿಕೆ ಇಟ್ಟು 3 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಿದ್ದಾರೆ ಎಂದು ಮತ ಹಾಕಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.ಬಳಿಕ ಉತ್ತರ ಕನ್ನಡ ಅಭಿವೃದ್ಧಿಗೆ ನಿಮ್ಮ ವಿಶೇಷ ಯೋಜನೆಗಳೇನು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ರಯತ್ನ ಮಾಡಲಾಗುವುದು.ರೈಲ್ವೆ,ರಾಷ್ಟ್ರೀಯ ಹೆದ್ದಾರಿ,ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಮತ್ತು ಅರಣ್ಯ ಭೂಮಿ ಅತಿಕ್ರಮಣದಾರರಿಗೆ ನ್ಯಾಯ ಒದಗಿಸುವುದು ಸೇರಿದಂತೆ ಸಾಕಷ್ಟು ಯೋಜನೆಗಳಿವೆ ಅವಗಳನ್ನು ಹಂತ ಹಂತವಾಗಿ ಕಾರ್ಯಗತಗೊಳಿಸಲು ಪ್ರಯತ್ನ ನಡೆಸಲಾಗುವುದು ಎಂದರು.
ಸಂಸದರ ಭೇಟಿ ವೇಳೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾದ ಎಲ್ ಟಿ ಪಾಟೀಲ್,ಮಂಡಲ ಅಧ್ಯಕ್ಷ ಮಂಜುನಾಥ್,ರಾಜೇಶ್ ರಾವ್,ಸುನಿಲ್ ವೆರ್ಣೇಕರ್,ಗುರು ಕಾಮತ್,ಮಂಜು ಎಚ್ ಪಿ, ದತ್ತಾತ್ರೇಯ ರಾಯ್ಕರ್,ವಿಠ್ಠಲ್ ಬಾಳಂಬೀಡ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.