ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವರಗೋನಾಳ ಪ್ರಾಥಮಿಕ ಆರೋಗ್ಯ ಕೇಂದ್ರ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಆರೋಗ್ಯ ಮೇಳವನ್ನು ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ಕಾರ್ಯಕ್ರಮ ಉದ್ಘಾಟಿಸಿ ಚಾಲನೆ ನೀಡಿ ಮಾತನಾಡಿ
ಜಾನಪದ ಕಲಾತಂಡದಿಂದ,ವಿಶ್ವ ರಕ್ತ ದಾನಿಗಳ ದಿನಾಚರಣೆ,ರಕ್ತಹೀನತೆ,ಸಾಂಕ್ರಾಮಿಕ,ಅಸಾಂಕ್ರಾಮಿಕ ರೋಗಗಳು ಹಾಗೂ ಇನ್ನಿತರೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಪ್ರಭುಲಿಂಗ ಮಾನಕರ್ ಅವರು ಅಧ್ಯಕ್ಷತೆ ವಹಿಸಿದ್ದರು.ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು,ರಕ್ತದಾನ ಶಿಬಿರ,ಜಾಥಾ ಕಾರ್ಯಕ್ರಮಗಳಿಗೆ ಚಾಲನೆ ನೀಡುವುದರ ಜೊತೆಗೆ ಫಲಾನುಭವಿಗಳಿಗೆ ಕನ್ನಡಕ, ಅತಿ ಹೆಚ್ಚು ರಕ್ತದಾನ ಮಾಡಿದ ದಾನಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು,ಕಾರ್ಯಕ್ರಮದಲ್ಲಿ ಮಾಹಿತಿ, ತಪಾಸಣೆ,ಪರೀಕ್ಷೆ,ಚಿಕಿತ್ಸೆ,ಸೇವೆ ಸೌಲಭ್ಯಗಳನ್ನು ನೀಡಲಾಯಿತು,
ಈ ಸಂದರ್ಭದಲ್ಲಿ ತಾಲೂಕ ಆರೋಗ್ಯ ಅಧಿಕಾರಿಗಳು, ತಹಸಿಲ್ದಾರರು,ಸುರಪುರ,ಆರೋಗ್ಯ ಇಲಾಖೆಯ ಅಧಿಕಾರಿ,ಸಿಬ್ಬಂದಿಗಳು,ಗ್ರಾಮ ಪಂಚಾಯಿತಿಯ ಅಧ್ಯಕ್ಷರು,ಪಿಡಿಒ,ಸಿಬ್ಬಂದಿಗಳು,ಆಶಾ,ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ವರದಿ:ಶಿವರಾಜ ಸಾಹುಕಾರ್,ವಡಗೇರಾ