ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಖಾದಿ ಗ್ರಾಮೋದ್ಯೋಗ ಮಂಡಳಿಯಿಂದ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಬ್ಯಾಂಕುಗಳಿಂದ ಸಾಲ ಪಡೆದು ಉತ್ಪಾದನಾ/ಸೇವಾ ಘಟಕ ಪ್ರಾರಂಭಿಸಲು ಗ್ರಾಮೀಣ ಮತ್ತು ನಗರ ಪ್ರದೇಶಗಳ ಯುವಕ/ಯುವತಿಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಈ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಉತ್ಪಾದನಾ ಮತ್ತು ಸೇವಾ ವಲಯದ ಚಟುವಟಿಕೆ ಪ್ರಾರಂಭಿಸಲು ಕೇಂದ್ರ ಸರ್ಕಾರದಿಂದ ಶೇ.25 ರಿಂದ 35ರವರೆಗೆ ಮತ್ತು ನಗರ ಪ್ರದೇಶದವರಿಗೆ ಶೇ.15 ರಿಂದ 25ರವರೆಗೆ ಸಹಾಯಧನ ಲಭ್ಯವಿದ್ದು, ಉತ್ಪಾದನಾ ಘಟಕಗಳಿಗೆ ರೂ.50 ಲಕ್ಷ ಹಾಗೂ ಸೇವಾ ಘಟಕಗಳಿಗೆ 20 ಲಕ್ಷ ಗರಿಷ್ಠ ಯೋಜನಾ ವೆಚ್ಚದ ಘಟಕಗಳಿಗೆ ಬ್ಯಾಂಕುಗಳಿಂದ ಆರ್ಥಿಕ ನೆರವು ಪಡೆಯಲು ಅವಕಾಶವಿರುತ್ತದೆ.
ಆಸಕ್ತರು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ,ಜಿಲ್ಲಾ ಕಚೇರಿ,‘ಬಿ’ ಬ್ಲಾಕ್-7,ಎರಡನೇ ಮಹಡಿ,ಉಪವಿಭಾಗಾಧಿಕಾರಿಗಳ ಕಚೇರಿ ಕಟ್ಟಡ,ಬಾಲರಾಜ್ ಅರಸ್ ರಸ್ತೆ,ಶಿವಮೊಗ್ಗ ಇಲ್ಲಿಗೆ ಭೇಟಿ ನೀಡಿ ನಿಖರ ಮಾಹಿತಿ ಪಡೆದು ಜಾಲತಾಣ https://www.kviconline.gov.in/pmegpeportal ರಲ್ಲಿ ಆನ್‍ಲೈನ್ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಕೆ.ಗೋವಿಂದಪ್ಪ ಇವರನ್ನು ಕಚೇರಿಯಲ್ಲಿ ಖುದ್ದಾಗಿ ಅಥವಾ ದೂ.ಸಂ:08182-223273/9480825637 ಇವರನ್ನು ಸಂಪರ್ಕಿಸುವುದು.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ