ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರವೇ ಯುವಸೇನೆ ಹಾಗೂ ಆನಂದಣ್ಣ ಯಂಗ್ ಬ್ರಿಗೇಡ್ ವತಿಯಿಂದ ಉಚಿತ ಟ್ರ್ಯಾಕ್ ಸೂಟ್ ವಿತರಣೆ

ಶಿವಮೊಗ್ಗ ಜಿಲ್ಲೆಯ ಆನಂದಣ್ಣ ಯಂಗ್ ಬ್ರಿಗೇಡ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಹುಣಸೆಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತವಾಗಿ ಟ್ರ್ಯಾಕ್ ಸೂಟ್,ಸಮವಸ್ತ್ರ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಸುಮಾರು 150 ಮಕ್ಕಳಿಗೆ ಶನಿವಾರದಂದು ವಿಶೇಷ ರೀತಿಯಲ್ಲಿ ಸಮವಸ್ತ್ರವನ್ನು ವಿತರಿಸಲಾಯಿತು ಸರ್ಕಾರಿ ಶಾಲೆಯ ಮಕ್ಕಳು ಖಾಸಗಿ ಶಾಲೆಯ ಮಕ್ಕಳಿಗಿಂತ ಕಡಿಮೆ ಏನೂ ಇಲ್ಲ ಎಂಬ ಭಾವನೆಯನ್ನು ವ್ಯಕ್ತಪಡಿಸುವ ನಿಟ್ಟಿನಲ್ಲಿ ಮಕ್ಕಳ ಸಂತೋಷ ಎದ್ದು ಕಾಣುತ್ತಿತ್ತು.
ಈ ಸಂತೋಷದಲ್ಲಿ ಭಾಗಿಯಾದ ಶಿಕ್ಷಕ ವೃಂದ ಮನ ಪೂರ್ವಕವಾಗಿ ಕರವೇ ಯುವ ಸೇನೆ ಹಾಗೂ ಆನಂದಣ್ಣಯಂಗ್ ಬ್ರಿಗೇಡ್ ಅಧ್ಯಕ್ಷರ ನೇತೃತ್ವದ ತಂಡವನ್ನು ಅಭಿನಂದಿಸಿದರು.ಈ ಸಂದರ್ಭದಲ್ಲಿ ಕರವೇ ಯುವ ಸೇನೆ ಹಾಗೂ ಆನಂದಣ್ಣ ಯಂಗ್ ಬ್ರಿಗೇಡ್ ಅಧ್ಯಕ್ಷರು ಕಿರಣ್ ಕುಮಾರ್ ಹೆಚ್ಎಸ್ ಮಾತನಾಡಿ ನಾವು ಯಾವಾಗಲೂ ಕನ್ನಡ ಶಾಲೆಗಳ ಪರವಾಗಿದ್ದೇವೆ ಎಂದು ಹೇಳಿದರು ಯಾವಾಗಲೂ ಕನ್ನಡ ಶಾಲೆಗಳ ಉಳಿವಿಗಾಗಿ ಹೋರಾಟ ಮಾಡುವುದಾಗಿ ಸಹ ತಿಳಿಸಿದರು‌.ಅತಿ ಹೆಚ್ಚು ಅಂಕ ಪಡೆದ ಹೊಸನಗರ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ಚಿನ್ಮಯ್ ಸಿ ಅವರನ್ನು ಕರವೇ ಯುವ ಸೇನೆಯಿಂದ ಸನ್ಮಾನಿಸಲಾಯಿತು ಕರವೇ ಯುವಸೇನೆ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ್ ಖಜಾಂಚಿ ಗಣೇಶ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿನಯ್ ಕುಮಾರ್ ಜಿಲ್ಲಾ ಕಾರ್ಯದರ್ಶಿ ರಾಮು ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಎನ್.ಮಾಲತೇಶ್ ಕರ್ನಾಟಕ ರಾಜ್ಯ ಪತ್ರಿಕ ವಿತರಕರ ಒಕ್ಕೂಟ ಹಾಗೂ ಸಂಘಟನೆಯ ವಿವಿಧ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ