ಶಿವಮೊಗ್ಗ:ಜಿಲ್ಲೆಯ ಕಲಾವಿದರು ಅಥವಾ ಕಲಾ ತಂಡಗಳಿಗೆ ಗುರುತಿನ ಚೀಟಿಯನ್ನು ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾವಾರು ಕ್ರೋಢೀಕರಿಸುವ ದೃಷ್ಠಿಯಿಂದ ಕಲಾವಿದರು ಅಥವಾ ಕಲಾ ತಂಡಗಳ ಪಟ್ಟಿಯನ್ನು ತಯಾರಿಸಿ ಗುರುತಿನ ಚೀಟಿಯನ್ನು ನೀಡಲು ಕ್ರಮಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಆಸಕ್ತ ಕಲಾವಿದರು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಶಿವಮೊಗ್ಗ ಈ ಕಚೇರಿಯಿಂದ ನಿಗದಿತ ನಮೂನೆಯನ್ನು ಪಡೆದು ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಜೂನ್ 30 ರ ಒಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ. 08182 223354 ಸಂಪರ್ಕಿಸಬಹುದೆಂದು ಶಿವಮೊಗ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ