ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕು ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ.ಅವರು ಜನಸ್ಪಂದನ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡಿ, ವಡಗೇರಾ ತಾಲೂಕು ಪಂಚಾಯತ್ ಇಓ ಮಲ್ಲಿಕಾರ್ಜುನ ಸಂಗವಾರ, ವಡಿಗೇರಾ ತಹಶೀಲ್ದಾರ ಶ್ರೀನಿವಾಸ ಚಾಪೆಲ್, ಯಾದಗಿರಿ ಡಿವೈಎಸ್ಪಿ ಅರುಣಕುಮಾರ ಕೋಳೂರು, ಯಾದಗಿರಿ ಡಿಎಆರ್ ಡಿವೈಎಸ್ಪಿ ಭರತ್ ಜಿ ತಳವಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ:ಶಿವರಾಜ ಸಾಹುಕಾರ್,ವಡಗೇರಾ