ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರೇಟ್ರೋಲ್ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಕಲಬುರಗಿ/ಚಿತ್ತಾಪುರ:
ಪೇಟ್ರೋಲ್ ಮತ್ತು ಡಿಸೇಲ್
ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಿತ್ತಾಪುರ ಪಟ್ಟಣದ ಲಾಡ್ಜೀಂಗ್ ಕ್ರಾಸ್’ನಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷರದ ರವೀಂದ್ರ ಸಜ್ಜನಶೆಟ್ಟಿ ಅವರ ನೇತೃತ್ವದಲ್ಲಿ ಮುಖಂಡರು ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಿದರು.
ನಂತರ ಬಿಜೆಪಿ ಮುಖಂಡ ಸುರೇಶ ಬೆನಕನಳ್ಳಿ ಮಾತನಾಡಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರ ಹಿಡಿದಾಗಿನಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ ದಿನನಿತ್ಯ ತರಕಾರಿ ಬೆಲೆ ಗಗನಕ್ಕೆ ಏರುತ್ತಿವೆ ಜನ ಸಾಮಾನ್ಯರು ಮನೆ ನಡೆಸಬೇಕಾದರೇ ತೊಂದರೆ ಅನುಭವಿಸುವಂತಾಗಿದೆ ಅದರಲ್ಲಿ ಇವರು ಪೇಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮಾಡಿ ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯನ್ನಾಗಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದೇ ವೆಳೆ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪಕ್ಷದ ಮುಖಂಡರು ಕೆಲ‌ಕಾಲ ರಸ್ತೆ ತಡೆ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ನಾಗರಾಜ ಭಂಕಲಗಾ, ನೀಲಕಂಠ ಪಾಟೀಲ್, ಗೋಪಾಲ್ ರಾಠೋಡ, ಮಹ್ಮದ್ ಯೂನೋಸ್, ಮಲ್ಲಿಕಾರ್ಜುನ ಪೂಜಾರಿ, ಅಕ್ಕಮಹಾದೇವಿ, ನಾಗುಬಾಯಿ ಜಿತುರೆ, ತಮ್ಮಣ್ಣ ಡಿಗ್ಗಿ, ಬಾಲಾಜಿ ಬುರಬುರೆ, ಶಿವರಾಮ ಚವ್ಹಾಣ ಸೇರಿದಂತೆ ಬಿಜೆಪಿ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು

ವರದಿ ಮೊಹಮ್ಮದ್ ಅಲಿ,ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ