ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಮಲಾ ಹಂಪನಾ ಅವರ ಅಗಲಿಕೆಯಿಂದ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ:ಹಿರಿಯ ಸಾಹಿತಿ ಕೆ ವೈ ಕಂದಕೂರು

ಕೊಪ್ಪಳ/ಕುಷ್ಟಗಿ:ಸಾಹಿತ್ಯ ಲೋಕಕ್ಕೆ ಕಮಲಾ ಹಂಪನಾ ಅವರ ಕೊಡುಗೆ ಅಪಾರವಾಗಿದ್ದು ಅವರ ಅಗಲಿಕೆಯಿಂದ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಹಿರಿಯ ಸಾಹಿತಿ ಕೆ ವೈ ಕಂದಕೂರು ಅವರು ಅಭಿಪ್ರಾಯಪಟ್ಟರು.
ತಾಲೂಕಿನ ದೋಟಿಹಾಳ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ದೋಟಿಹಾಳ-ಕೇಸೂರು ವತಿಯಿಂದ ಸಾಹಿತಿ ಡಾ.ಕಮಲಾ ಹಂಪನಾ ಅವರು ನಿಧನರಾದ ಹಿನ್ನಲೆಯಲ್ಲಿ ನುಡಿ ನಮನವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಭಾಗವಹಿಸಿ ಮಾತನಾಡಿ ಡಾ.ಕಮಲಾ ಹಂಪನಾ ಅವರು ಸಾಹಿತ್ಯ ಕೃಷಿಯ ಜೊತೆ ಸಂಶೋಧನೆ ಮತ್ತು ಬೋಧನೆಗಳಿಂದಲೂ ಜನಪ್ರಿಯರಾಗಿದ್ದರು ಅವರ ಕೃತಿಗಳು ಅದ್ಬುತವಾಗಿವೆ ಎಂದರು.
ಸಾಹಿತಿ ನಿಂಗಪ್ಪ ಸಜ್ಜನ ಮಾತನಾಡಿ ಡಾ.ಕಮಲಾ ಹಂಪನಾ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡು ಬಿದಿರೆಯಲ್ಲಿ ನಡೆದ ಅಖಿಲ ಭಾರತ 71ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರು ಸರ್ಕಾರದ ಪುರಸ್ಕಾರವಾದ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡ ಮಾಡುವ ನಾಡೋಜ ಪ್ರಶಸ್ತಿ ಪುರಸ್ಕೃತರಾಗಿದ್ದರು ಹಂಪನಾ ಅವರ ಬರವಣಿಗೆಯು ದೊಡ್ಡದಾಗಿದೆ. ಹಂಪನಾ ಅವರ ಲೇಖನಗಳು, ಸಂಶೋಧನೆಗಳ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು ಸಾಹಿತ್ಯ ಲೋಕಕ್ಕೆ ಹೆಮ್ಮೆ ತಂದಿದ್ದರು ಎಂದರು.
ಮೌನಾಚರಣೆ:ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ದೋಟಿಹಾಳ ಕೇಸೂರು ಪದಾಧಿಕಾರಿಗಳು ಹಾಗೂ ಕನ್ನಡಾಭಿಮಾನಿಗಳು ಸಾಹಿತಿ ಡಾ.ಕಮಲಾ ಹಂಪನಾ ನಿಧನದ ಹಿನ್ನಲೆಯಲ್ಲಿ ಒಂದು ನಿಮಿಷಗಳ ಕಾಲ ಮೌನಾಚರಣೆಯನ್ನು ಮಾಡಲಾಯಿತು.
ಶಿಕ್ಷಕ ನಾಗರಾಜ ಶೆಟ್ಟರ, ರುದ್ರಮುನಿಸ್ವಾಮಿ ದೇವಾಂಗಮಠ, ರಹಿಮಾನಸಾಬ ಮಾರನಬಸರಿ ಮಾತನಾಡಿದರು.
ಈ ಸಂದರ್ಭದಲ್ಲಿ ಹನುಮಂತರಾವ ದೇಸಾಯಿ, ಶ್ರೀನಿವಾಸ ಕಂಟ್ಲಿ, ಉಮಾಪತಿ ಮಾಳಗಿ, ಪರಶಿವಮೂರ್ತಿ ಮಾಟಲದಿನ್ನಿ, ಶೇಖಪ್ಪ ದೊಡ್ಡಮನಿ, ಮಂಜುನಾಥ ಅಂಗಡಿ, ಹಿದಾಯತ್ ನೀಲಗಾರ, ಚನ್ನಬಸವ ಚೌರಿ,ಅಮರೇಶ ತಾರಿವಾಳ ಸೇರಿದಂತೆ ಹಲವರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ