ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ಕಾರಿ ಶಾಲಾ ಮಕ್ಕಳ ಸಹಾಯಕ್ಕೆ ನಿಂತ ನಿರುಪಾದಿ ಕೆ ಗೋಮರ್ಸಿ

ರಾಯಚೂರು:ನಿಮ್ಮಿಂದ,ನಿಮಗಾಗಿ,ನಾವು ವೇದಿಕೆ ವತಿಯಿಂದ ನಿನ್ನೆ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಉರ್ದು ಶಾಲೆ ಕುನ್ನಟಗಿ ಗ್ರಾಮದಲ್ಲಿ 2024-25 ರ ಸಾಲಿನಲ್ಲಿ ಒಂದನೇ ತರಗತಿಗೆ ಪ್ರವೇಶ ಪಡೆದ ಸುಮಾರು 20 ಕ್ಕೂ ಹೆಚ್ಚಿನ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್, ನೋಟ್ ಬುಕ್,ಪೆನ್ನು,ಪೆನ್ಸಿಲ್ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಿರುಪಾದಿ ಕೆ ಗೋಮರ್ಸಿ ನಮ್ಮ ವೇದಿಕೆಯು ಗ್ರಾಮೀಣ ಸರ್ಕಾರಿ ಶಾಲೆಯ ಮಕ್ಕಳ ಭವ್ಯ ಭವಿಷ್ಯಕ್ಕಾಗಿ ಶ್ರಮ ಪಡುತ್ತಿದೆ.
ನಮ್ಮ ವೇದಿಕೆಯ ಉದ್ದೇಶವೂ ಮಕ್ಕಳಿಗೆ ಮೂಲಭೂತ ಅವಶ್ಯಕತೆಗಳ ವಸ್ತುಗಳನ್ನು ವಿತರಿಸುವುದು ಹಾಗೂ ಮಕ್ಕಳು ಕಲಿಕೆಯಲ್ಲಿ ಉತ್ಸಾಹ ಉಲ್ಲಾಸ ಆಸಕ್ತಿಯಿಂದ ಕಲಿಯುವಂತೆ ಮಾಡುವುದು.ಮಕ್ಕಳ ಪಾಲಕ ಪೋಷಕರಿಗೆ ಮಕ್ಕಳ ವಿದ್ಯಾಭ್ಯಾಸವು ಹೊರೆ ಆಗದಂತೆ ನೋಡಿಕೊಳ್ಳುವುದಾಗಿದೆ ಜೊತೆಗೆ ಸರ್ಕಾರಿ ಶಾಲೆ ಕಲಿಕೆಯ ಗುಣಮಟ್ಟ,ಪರಿಸರ, ಮಹತ್ವದ ಕುರಿತಾದ ಅರಿವು ಮೂಡಿಸುವುದಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಅಜೀದ್ ಪಾಶ,ಅಯ್ಯಪ್ಪ ಮೇಟಿ,ಶರಣಪ್ಪ ಬೇರಗಿ,ಶಂಶುದ್ದೀನ್ ಸೇರಿದಂತೆ ಗ್ರಾಮದ ಹಿರಿಯ ಮುಖಂಡರು,ಶಾಲೆಯ ಆಡಳಿತ ಮಂಡಳಿ ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ