ಶಿವಮೊಗ್ಗ:2024-25ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಕಳೆದ ಸಾಲಿನ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ,ಸ್ಯಾಟ್ಸ್ ಐಡಿ(ಮೆಟ್ರಿಕ್ ಪೂರ್ವ ವಿದ್ಯಾರ್ಥಿಯಾಗಿದ್ದಲ್ಲಿ ), ಎಸ್.ಎಸ್.ಪಿ ಐಡಿ, ಯೂನಿರ್ವಸಿಟಿ ಐಡಿ (ಮೆಟ್ರಿಕ್ ನಂತರದ ವಿದ್ಯಾರ್ಥಿಯಾದಲ್ಲಿ) ಸೂಕ್ತ ದಾಖಲೆಗಳೂಂದಿಗೆ, ಪ್ರವೇಶ ಬಯಸುವ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡ ಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಸಮಾಜಕಲ್ಯಾಣ ಇಲಾಖೆ, ಸಾಗರ ತಾಲ್ಲೂಕು ಕಚೇರಿಗೆ ಸಂಪರ್ಕಿಸಬಹುದು ಎಂದು ಸಾಗರ ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ