ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

100 ಸರಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಬಾಗಲಕೋಟೆ ಜಿಲ್ಲೆಯ ಅಮೀನಗಡ ಸಮೀಪದ ಸೂಳೇಬಾವಿಯ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢ ವಿಭಾಗದಲ್ಲಿ ದಿ. 28 ರಂದು ಶುಕ್ರವಾರ ಮಧ್ಯಾಹ್ನ 1 ಗಂಟೆಗೆ

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ನಿರ್ಮಿತಿ ಕೇಂದ್ರ, ಶಾಲಾ ಶಿಕ್ಷಣ ಇಲಾಖೆ ಬಾಗಲಕೋಟೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹುನಗುಂದ ಇವರ ಸಹಯೋಗದಲ್ಲಿ ಸರಕಾರಿ ಶಾಲೆಗಳ ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಸಮಾರಂಭ ನಡೆಯಲಿದೆ.

ಹುನಗುಂದ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಹಂತದ ಆಯ್ದ ಒಂದು ನೂರು ಶಾಲೆಗಳಲ್ಲಿ ಈ ಸೇವೆ ಲೋಕಾರ್ಪಣೆಗೊಳ್ಳಲಿದೆ. 2023-24 ನೇ ಸಾಲಿನ ಡಿ ಎಂ ಎಫ್ ಅನುದಾನದಡಿಯಲ್ಲಿ ಅಳವಡಿಸಲಾಗಿರುವ ಸ್ಮಾರ್ಟ್ ಕ್ಲಾಸ್ ಗಳು ಗುಣಮಟ್ಟದ ಶಿಕ್ಷಣ, ಸರಕಾರಿ ಶಾಲೆಗಳ ಸಬಲೀಕರಣ, ಆಕರ್ಷಕ, ಆಧುನಿಕ ಡಿಜಿಟಲ್ ತಂತ್ರಜ್ಞಾನಾಧಾರಿತ ಬೋಧನಾ ವ್ಯವಸ್ಥೆ, ಮಕ್ಕಳ ದಾಖಲಾತಿ ಹೆಚ್ಚಳದಂತಹ ಅನೇಕ ಗುರಿ-ಉದ್ದೇಶಗಳನ್ನಿಟ್ಟುಕೊಂಡು ಚಾಲನೆಗೊಳ್ಳಲಿದೆ.
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ನೆರವೇರಿಸಲಿದ್ದು, ಚಿತ್ತರಗಿ ಶ್ರೀ ವಿಜಯ ಮಹಾಂತೇಶ ಸಂಸ್ಥಾನ ಮಠ, ಇಳಕಲ್ಲದ ಗುರು ಮಹಾಂತ ಶ್ರೀಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ, ಶಾಸಕರಾದ ಎಚ್ ವೈ ಮೇಟಿ, ಜೆ ಟಿ ಪಾಟೀಲ, ಸಂಸದರಾದ ಪಿಸಿ ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ವಿಧಾನ ಪರಿಷತ್ ಸದಸ್ಯರಾದ ಪಿ ಎಚ್ ಪೂಜಾರ, ಹನುಮಂತ ನಿರಾಣಿ, ಸುನೀಲಗೌಡ ಬಿ ಪಾಟೀಲ್, ಸೂಳೇಬಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಿಡ್ಡಪ್ಪ ಕುರಿ, ಜಿಲ್ಲಾಧಿಕಾರಿ ಕೆ ಎಂ ಜಾನಕಿ, ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಜಯಶ್ರೀ ಶಿಂತ್ರಿ, ಉಪನಿರ್ದೇಶಕರಾದ ಬಿ ಕೆ ನಂದನೂರ, ಉಪ ವಿಭಾಗಾಧಿಕಾರಿ ಸಂತೋಷ್ ಜಗಲಾಸರ, ಹುನಗುಂದ ತಾಲೂಕ ಪಂಚಾಯತ್ ಆಡಳಿತಾಧಿಕಾರಿ ಡಾ. ಪುನೀತ್ ಜಿ ಆರ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಮುತ್ತಪ್ಪ ಪಿ, ನಿರ್ಮಿತಿ ಕೇಂದ್ರ ಬಾಗಲಕೋಟೆಯ ಯೋಜನಾ ನಿರ್ದೇಶಕ ಶಂಕರಲಿಂಗ ಗೋಗಿ, ತಹಸೀಲ್ದಾರ್ ನಿಂಗಪ್ಪ ಬಿರಾದಾರ, ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮುರುಳಿಧರ ದೇಶಪಾಂಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೆದಾರ, ತಾಲೂಕ ಅಕ್ಷರ ದಾಸೋಹ ಅಧಿಕಾರಿ ಬಿ ಹೆಚ್ ತಿಳಿಗೋಳ, ಪ್ರಭಾರಿ ಕ್ಷೇತ್ರ ಸಮನ್ವಯ ಅಧಿಕಾರಿ ವಿನೋದಕುಮಾರ್ ಭೋವಿ ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಮಾಜಿ ಶಾಸಕ ಎಸ್ ಜಿ ನಂಜಯ್ಯನಮಠ, ರವೀಂದ್ರ ಕಲಬುರ್ಗಿ, ಗಂಗಾಧರ ದೊಡ್ಡಮನಿ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ