ಕಲಬುರಗಿ/ಚಿತ್ತಾಪುರ:ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ ಕಟ್ಟಾಳು ಮುಕ್ತಾರ್ ಪಟೇಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಚಿತ್ತಾಪುರ ಜಮೀಯತುಲ್ ಖುರೇಶ್ (ಖಸಾಬ್) ಚಾರಿಟೇಬಲ್ ಹಾಗೂ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಮೊಹಮ್ಮದ್ ರಿಯಾಜ್ ಖುರೇಶ್ ಅವರು ಒತ್ತಾಯಿಸಿದ್ದಾರೆ.
ಕಳೆದ 30 ವರ್ಷಗಳಿಂದ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಅಲ್ಪಸಂಖ್ಯಾತರ ಮತಗಳು ವಿಭಜನೆಯಾದಂತೆ ಒಗ್ಗೂಡಿಸಿ ಸಂಘಟಿಸುವುದರಲ್ಲಿ ಇವರ ಶ್ರಮ ಸಾಕಷ್ಟಿದೆ.ಇವರು ಯಾವುದೇ ಅಧಿಕಾರಕ್ಕೆ ಆಸೆ ಪಡೆದೆ ಸಾಮಾನ್ಯ ಕಾರ್ಯಕರ್ತನಂತೆ ಸೇವೆ ಸಲ್ಲಿಸುತ್ತಿದ್ದಾರೆ. ಲೋಕಸಭೆ,ವಿಧಾನಸಭೆ,ವಿಧಾನ ಪರಿಷತ್, ಎಪಿಎಂಸಿ,ಜಿ.ಪಂ,ತಾ.ಪಂ,ಪುರಸಭೆ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಗೆಲುವಿಗೆ ಹಗಲು ರಾತ್ರಿ ಎನ್ನದೇ ಶ್ರಮಿಸಿದ್ದಾರೆ ಎಂದರು
ಇದೀಗ ಹಾಲಿ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಅಲ್ಪಸಂಖ್ಯಾತರಲ್ಲದೇ ಎಲ್ಲಾ ಜಾತಿಗಳ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ವ ಕಾರ್ಯಕರ್ತರ ಕುಂದು ಕೊರತೆಗಳಿಗೆ ಸ್ಪಂಧಿಸುತ್ತಾ ಎಲ್ಲರ ವಿಶ್ವಾಸ ಗಳಿಸಿದ್ದಾರೆ.ಹೀಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಕ್ತಾರ್ ಪಟೇಲ್ ಅವರ ಸೇವೆಯನ್ನು ಪರಿಗಣಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ವರದಿ ಮೊಹಮ್ಮದ್ ಅಲಿ ಚಿತ್ತಾಪುರ