ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಶಕೋಶ ಮತ್ತು ಇತಿಹಾಸ ವಿಭಾಗದ ವತಿಯಿಂದ ಜನಪದ ಸಾಹಿತ್ಯದಲ್ಲಿ ಇತಿಹಾಸ ಎಂಬ ವಿಶೇಷ ಕಾರ್ಯಕ್ರಮ ಇಂದು ಜರುಗಿತು.
ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾದ ಶ್ರೀ ಮಲ್ಲಪ್ಪ ಅಂಬಿಗೇರ ಅವರು ಇತಿಹಾಸದ ಘಟನೆಗಳು ನಮಗೆ ಜನಪದ ಸಾಹಿತ್ಯದಲ್ಲಿ ಹಾಸು ಹೊಕ್ಕಿವೆ. ಇತಿಹಾಸದ ಘಟನೆಗಳಿಗೆ ಆಧಾರಗಳು ಇಲ್ಲದಿದ್ದಾಗ ಜನಪದ ಸಾಹಿತ್ಯ ನಮಗೆ ಇತಿಹಾಸವನ್ನು ಕಟ್ಟಿಕೊಡುತ್ತದೆ. ಜನಪದ ಸಾಹಿತ್ಯದಲ್ಲಿ ವಿಜಯನಗರ ಸಾಮ್ರಾಜ್ಯ ಹಲಗಲಿಯ ಬೇಡರು ಕಿತ್ತೂರಾಣಿ ಚೆನ್ನಮ್ಮ ಸಂಗೊಳ್ಳಿ ರಾಯಣ್ಣ ಸಿಂಧೂರ ಲಕ್ಷ್ಮಣ ಇವರ ಬಗ್ಗೆ ಜನಪದ ಸಾಹಿತ್ಯದಲ್ಲಿ ಮಾಹಿತಿ ಸಿಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಚಾರ್ಯರ ಡಾ.ಗಣಪತಿ ಕೆ ಲಮಾಣಿ ಅವರು ಮಾತನಾಡಿ ಇತಿಹಾಸವನ್ನು ನಾವು ತಿಳಿದುಕೊಳ್ಳುವಲ್ಲಿ ಜನಪದ ಸಾಹಿತ್ಯದ ಪಾತ್ರ ಬಹು ಮುಖ್ಯವಾಗಿದೆ. ಆದ್ದರಿಂದ ಎಲ್ಲರೂ ಜಾನಪದ ಸಾಹಿತ್ಯವನ್ನು ಓದಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕರಾದ ಡಾ.ಅಶೋಕ್ ಕುಮಾರ್,ಇತಿಹಾಸ ವಿಭಾಗದ ಉಪನ್ಯಾಸಕರಾದ ಶ್ರೀ ಮಹೇಶ್ ಪೂಜಾರ್,ಪುತ್ರೇಶ್ ಗೌಡ ಪಾಟೀಲ್,ಅರ್ಥಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಬಸಮ್ಮ ಮತ್ತು ಶ್ರೀಮತಿ ಆರತಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಇತಿಹಾಸ ಉಪನ್ಯಾಸಕರಾದ ಮಲ್ಲಿಕಾರ್ಜುನ್ ಕಾರ್ಯಕ್ರಮವನ್ನು ನಿರೂಪಿಸಿದರು,ಕುಮಾರಿ ಅಕ್ಷತಾ ಸಂಗಡಿಗರು ಪ್ರಾರ್ಥಿಸಿದರು,ಮಹೇಶ್ ಪೂಜಾರ್ ಪ್ರಾಸ್ತಾವಿಕ ನುಡಿಗಳಾಡಿದರು,ಶ್ರೀಮತಿ ಬಸಮ್ಮ ಇವರು ವಂದಿಸಿದರು.