ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ನಗರದಲ್ಲಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಕೆಲ ಕೆರೆಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿ,ಮನೆಗಳನ್ನು ನಿರ್ಮಿಸಿಕೊಳ್ಳಲಾಗಿದೆ ಎಂದು ಹಿಂದಿನ ಸಂಚಿಕೆಗಳಲ್ಲಿ ಕರುನಾಡ ಕಂದ ವಿಸ್ಕೃತ ವರದಿ ಪ್ರಕಟಿಸಿತ್ತು ಹಾಗೂ ಈ ಬಗ್ಗೆ ಸತತ ಫಾಲೋ ಅಪ್ ಕೂಡಾ ಮಾಡಿತ್ತು,ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯ್ತಿ ಮುಂಡಗೋಡ ಮುಖ್ಯಾಧಿಕಾರಿ ಚಂದ್ರಶೇಖರ್ ಬಿ ಅವರು ಸಿಬ್ಬಂದಿಗಳ ನೆರವಿನಿಂದ ಜೆಸಿಬಿ ಮೂಲಕ ಅಕ್ರಮವಾಗಿ ನಿರ್ಮಿಸಿದ್ದ ಮನೆಯನ್ನು ತೆರವುಗೊಳಿಸಿದ್ದು,ಪಟ್ಟಣ ಪಂಚಾಯ್ತಿಗೆ ಸಂಬಂಧ ಪಟ್ಟ ಎಲ್ಲಾ ರೀತಿಯ ಆಸ್ತಿಗಳನ್ನು ರಕ್ಷಣೆ ಮಾಡುವುದಾಗಿ ಮತ್ತು ಭವಿಷ್ಯದಲ್ಲಿ ಒತ್ತುವರಿ ಆಗಿರುವ ಕೆರೆಗಳ ಪುನಶ್ಚೇತನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.