ಶಿವಮೊಗ್ಗ:ಮಲ್ಪೆ-ತೀರ್ಥಹಳ್ಳಿಯ ರಾಷ್ಟ್ರೀಯ ಹೆದ್ದಾರಿ-169ಎ ಚತುಷ್ಪಥ ಯೋಜನೆಯಲ್ಲಿ ಆಗುಂಬೆ ಘಾಟ್ನಲ್ಲಿ ಸುರಂಗ ಮಾರ್ಗ ನಿರ್ಮಾಣ ಮಾಡಲಾಗುತ್ತದೆ.ಕೇಂದ್ರ ಸರ್ಕಾರ ಈ ಯೋಜನೆ ಕುರಿತು ಡಿಪಿಆರ್ ಸಿದ್ಧಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಒಪ್ಪಿಗೆ ನೀಡಿದೆ.
ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದರು. ಶಿವಮೊಗ್ಗ ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿದರು.
ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ