ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕು ಪಂಚಾಯತ್ ನೂತನ ಕಛೇರಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಉದ್ಘಾಟನೆ ಮಾಡಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಉದ್ಘಾಟನೆ ಮಾಡಿ ನಂತರ ಮಾತನಾಡಿ ತಾಲ್ಲೂಕು ಕೇಂದ್ರದಲ್ಲಿ ಹಿಂದೆ ಇದ್ದಂತ ಕಚೇರಿಯು ಸಾರ್ವಜನಿಕರಿಗೆ, ಅಂಗವಿಕಲರಿಗೆ ತೊಂದರೆಯಾಗುತ್ತಿತ್ತು,ಆದ್ದರಿಂದ ಬಂಡಳ್ಳಿ ರಸ್ತೆಯಲ್ಲಿ ನೂತನವಾಗಿ ಉದ್ಘಾಟನೆ ಮಾಡಲಾಯಿತು.ಈ ಕಚೇರಿಯು ಎಲ್ಲರಿಗೂ ಅನುಕೂಲವಾಗುತ್ತದೆ.
ಹುಲ್ಲೆಪುರ ಸರ್ವೇಯಲ್ಲಿ ತಾಲ್ಲೂಕು ಪಂಚಾಯತ್ ಕಚೇರಿಗೆ ಸರ್ಕಾರಿ ಸ್ಥಳ ಗುರುತಿಸಿ,ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಅನುದಾನ ಬಂದ ನಂತರ ಹೊಸ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಕ್ರಮ ಕೈಗೊಳ್ಳಲಾಗುವುದು.
ಇದೇ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಎ ಡಿ ರವೀಂದ್ರ,ಪಿಡಿಒ ಗಳಾದ ಶಿವಕುಮಾರ್, ಸುರೇಶ್, ರಾಮು,ನಂಜುಂಡಸ್ವಾಮಿ, ಸಿದ್ದಪ್ಪ, ಮಾದೇಶ್, ವಿಶ್ವನಾಥ್, ನಂದೀಶ್ ಸೇರಿದಂತೆ ಇನ್ನಿತರ ಪಿ ಡಿ ಓ ಗಳು, ತಾಲ್ಲೂಕು ಪಂಚಾಯತ್ ಕಛೇರಿಯ ಸಿಬ್ಬಂದಿಗಳು ಹಾಜರಿದ್ದರು.
ವರದಿ:ಉಸ್ಮಾನ್ ಖಾನ್